ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾರ್ಚ್ 03 ರಿಂದ 06 ರ ವರೆಗೆ 2024ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ 0-5 ವರ್ಷದೊಳಗಿನ 1,00,105 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಇದ್ದು, ಇದಕ್ಕಾಗಿ ಜಿಲ್ಲೆಯಾದ್ಯಂತ ಒಟ್ಟು 476 ಪೋಲಿಯೋ ಬೂತ್‌ಗಳನ್ನು ಹಾಗೂ 135 ಟ್ರಾನ್ಸಿಟ್ ತಂಡಗಳನ್ನು ರಚಿಸಲಾಗಿರುತ್ತದೆ ಮತ್ತು ಜಿಲ್ಲೆಯಲ್ಲಿ ಒಟ್ಟು 1498 ಸೂಕ್ಷ್ಮ ಪ್ರದೇಶಗಳನ್ನು (ಹೆಚ್.ಆರ್.ಎ) ಗುರುತಿಸಲಾಗಿದ್ದು, ಇವುಗಳ ಮೇಲೆ ಹೆಚ್ಚು ನಿಗಾವಹಿಸಿ ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಯಾವುದೇ ಕಾರಣಕ್ಕೂ ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಕ್ರಮವಹಿಸಲಾಗಿದೆ.
ಎಲ್ಲಾ ಸರ್ಕಾರಿ ತಾಲ್ಲೂಕು ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 24/7 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ನಮ್ಮ ಕ್ಲಿನಿಕ್‌ಗಳಲ್ಲಿ ಹಾಗೂ ಶಾಲೆಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು.
ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೋಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಪೋಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಿ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…