ಮಾ.04 ಕ್ಕೆ ಹೊಸಕೋಟೆಯಲ್ಲಿ ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶದ ಕಾರ್ಯಕ್ರಮವನ್ನು ಮಾರ್ಚ್ 04 ರಂದು ಹೊಸಕೋಟೆ ನಗರದಲ್ಲಿರುವ ಶ್ರೀ ಬಿ.ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧಾ ಅವರು ತಿಳಿಸಿದ್ದಾರೆ.

ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಆಹಾರ, ನಾಗರಿಕ ಸರಬರಾಬು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರ ಸಮಕ್ಷಮದಲ್ಲಿ ಕಾರ್ಯಕ್ರಮ ನಡೆಯಲಿದೆ.

ಸುಮಾರು 3,100 ದರಖಾಸ್ತು ಪೋಡಿ, 10,200 ಪೌತಿ ಖಾತೆ ಹಾಗೂ 1,700 ಸಮಾಜಿಕ ಭದ್ರತೆಯ ಅಭಿಯಾನದಡಿಯಲ್ಲಿ ಒಟ್ಟು 15,000 ಕಂದಾಯ ಸೇವೆಗಳ ದಾಖಲೆಗಳ ವಿತರಿಸಲಾಗುವುದು.

ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದೇ ದಿನದಂದು ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಸಹಾಯಕರು, ಪೌರ ಕಾರ್ಮಿಕರು ಮತ್ತು ಗ್ರಾಮ ಪಂಚಾಯತಿ ಹಂತದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಗಾರರಿಗೆ ಮತ್ತು ಅವರ ಕುಟುಂಬದರಿಗೆ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಸದರು, ಶಾಸಕರು, ವಿಧಾನ ಪರಿಷತ್ತಿನ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಕಂದಾಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪುಧಾನ ಕಾರ್ಯದರ್ಶಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಕಂದಾಯ ಆಯುಕ್ತರು, ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ ಹಾಗೂ ಇನ್ನಿತರ ಅಧಿಕಾರಿಗಳು ಮತ್ತು ವಿವಿಧ ಕಂದಾಯ ಸೇವೆಗಳ ಫಲಾನುಭವಿಗಳು ಸುಮಾರು 8,000 ರಿಂದ 10,000 ಕ್ಕಿಂತ ಹೆಚ್ಚಿನ ಜನರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

111.355 ಕೆ.ಜಿ ಗಾಂಜಾ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ…

5 hours ago

ಏ.12ಕ್ಕೆ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ರಾಜ್ಯಮಟ್ಟದ ಸಾಮಾನ್ಯ…

5 hours ago

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಪ್ರಾರಂಭಕ್ಕೆ ಕ್ರಮಕೈಗೊಳ್ಳಲು ಶಾಸಕ ಧೀರಜ್ ಮುನಿರಾಜ್ ಮನವಿ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು…

6 hours ago

ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಗಂಡ ಕಿರುಕುಳ ಆರೋಪ: ಗಂಡನ ವಿರುದ್ಧ ಹೆಂಡತಿ ದೂರು

ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ...…

8 hours ago

ಸಂಕಷ್ಟದಿಂದ ಸುಸ್ಥಿತಿಗೆ – ವೈದ್ಯಕೀಯದ ಅದ್ಭುತ ಸಾಧನೆ

ಬೆಂಗಳೂರು, ವೈಟ್‌ಫೀಲ್ಡ್ : ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಯುವಕನಿಗೆ…

8 hours ago

ಅಪಘಾತ: ಮಹಿಳೆ ಬಲಿ ಪ್ರಕರಣ: ಡಿಕ್ಕಿ ಹೊಡೆದ ವಾಹನ, ಡ್ರೈವರ್ ಹಾಗೂ ಮೃತಳ ಗುರುತು ಪತ್ತೆ

ದೊಡ್ಡಬಳ್ಳಾಪುರ ತಾಲೂಕಿನ ಹಮಾಮ್ ಗೇಟ್(ಶಿವಪುರ ಗೇಟ್) ಬಳಿ ಇಂದು ರಾತ್ರಿ ಸುಮಾರು 9:30ರಲ್ಲಿ ದಾರಿಯಲ್ಲಿದ್ದ ಮಹಿಳೆಗೆ ಕೋಳಿ ಸಾಗಿಸುವ ಐಷರ್…

22 hours ago