ತಾಲೂಕಿನ ಮಧುರೆ ಹೋಬಳಿಯ ಚಿಕ್ಕಮಧುರೆಯ ಕನಸವಾಡಿ ಗ್ರಾಮದಲ್ಲಿ ನೆಲೆಸಿರುವಂತಹ ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ ಬ್ರಹ್ಮರಥೋತ್ಸವವನ್ನ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಯನ್ನ ನಡೆಸಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಕಾರ್ಯದರ್ಶಿ ಸಿ.ಡಿ.ಸತ್ಯನಾರಾಯಣ ಗೌಡ ತಿಳಿಸಿದರು.
ತಾಲೂಕಿನ ಕನಸವಾಡಿ ಗ್ರಾಮದ ಶ್ರೀ ಶನಿಮಹಾತ್ಮಸ್ವಾಮಿ ದೇವಾಲಯದ ಅನ್ನದಾಸೋಹ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಸಮಿತಿ ರಚನೆಯಾಗಿ ನಾಲ್ಕು ವರ್ಷಗಳಾಗಿವೆ, ಈ ಸಮಯದಲ್ಲಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಲಾಗಿದೆ. ಪ್ರಸ್ತುತ ಇರುವ ಸಮಿತಿ ಹಾಗೂ ಧರ್ಮದರ್ಶಿಗಳು ದೇವಾಲಯದ ಅಭಿವೃದ್ಧಿ ಕಾರ್ಯಕ್ರಮಗಳ ವಿಚಾರವಾಗಿ ಉಸ್ತುಕರಾಗಿ ಕಾರ್ಯಪವೃತ್ತರಾಗಿದ್ದೇವೆ ಎಂದರು.
ಸಮಿತಿಗೆ ಅಭಿವೃದ್ಧಿಯ ಚಿಂತನೆ ಹೊರತು, ಹಣಕಾಸಿನ ಚಿಂತೆ ಇಲ್ಲ. ಭಕ್ತಾದಿಗಳಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಗಳು ಕೂಡಾ ಕಲ್ಪಿಸಲಾಗಿದೆ. ಪ್ರತಿದಿನವೂ ದಾಸೋಹದ ವ್ಯವಸ್ಥೆ ಸಹ ಮಾಡಲಾಗಿದೆ ಎಂದರು.
ನಂತರ ಕೆ.ವಿ.ಪ್ರಕಾಶ್ ಅವರು ಮಾತನಾಡಿ, ಮಾ.18ರಿಂದ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಪ್ರಾರಂಭವಾಗಿ ಮಾ.19ರಂದು ಮಧ್ಯಾಹ್ನ 1.10 ರಿಂದ 1.58ರಲ್ಲಿ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ಅದ್ಧೂರಿಯಾಗಿ ಬ್ರಹ್ಮರಥೋತ್ಸವ ನೆರವೇರಲಿದೆ.
ಮಾ.18ರಿಂದ ಒಂದು ವಾರಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಟಕ ಸೇರಿದಂತೆ ವಿವಿಧ ಬಗೆಯ ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗಿದೆ. ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ದೇವಾಲಯದ ಆಡಳಿತ ಮಂಡಳಿವತಿಯಿಂದ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಅರ್ಚಕರು, ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…