ದೊಡ್ಡಬಳ್ಳಾಪುರ : ಮಾರ್ಚ್ 22 ರಂದು ವಾಟಾಳ್ ನಾಗರಾಜ್ ನೇತೃತ್ವದ ಕನ್ನಡಪರ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಬೆಂಬಲಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕನ್ನಡಪರ ಸಂಘಟನೆಗಳ ಒಕ್ಕೂಟ ನಿರ್ಧರಿಸಿತು.
ನಗರದ ಕನ್ನಡ ಜಾಗೃತ ಭವನದಲ್ಲಿ ಸಭೆ ಸೇರಿದ್ದ ವಿವಿಧ ಕನ್ನಡ ಮತ್ತು ರೈತಪರ ಸಂಘಟನೆಗಳ ಮುಖಂಡರು, ಮಾರ್ಚ್ 22 ರಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಮುಂಭಾಗ ಬೃಹತ್ ಪ್ರತಿಭಟನೆಯ ಮೂಲಕ ಕರ್ನಾಟಕ ಬಂದ್ ಗೆ ಬೆಂಬಲಿಸಲು ನಿರ್ಧಾರ ಕೈಗೊಂಡರು.
ಈ ವೇಳೆ ಮಾತನಾಡಿದ ಮುಖಂಡರು, ಮಹಾರಾಷ್ಟ್ರದ ಎಂಇಎಸ್ ಪುಂಡರು, ನಮ್ಮ ರಾಜ್ಯದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ನಡೆಸಿದ್ದಲ್ಲದೆ ಮುಂದುವರೆದು ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೇಲೂ ದೌರ್ಜನ್ಯ ನಡೆಸಿದ್ದಾರೆ. ಈ ದೌರ್ಜನ್ಯ ಖಂಡಿಸಿ, ಕನ್ನಡಪರ ಹೋರಾಟಗಾರರಾದ ವಾಟಾಳ್ ನಾಗರಾಜ್, ಸಾರಾ.ಗೋವಿಂದ್, ಮಂಜುನಾಥ ದೇವ, ಪ್ರವೀಣ್ ಕುಮಾರ್ ಶೆಟ್ಟಿ ಮುಂತಾದವರು ಇದೇ ಮಾರ್ಚ್ 22 ರ ಶನಿವಾರ ಕರೆ ಕೊಟ್ಟಿರುವ ಬಂದ್ ಗೆ ಬೆಂಬಲ ಸೂಚಿಸಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದರು.
ಮರಾಠಿ ಎಂಇಎಸ್ ಪುಂಡರು ಪದೇ ಪದೇ ರಾಜ್ಯದ ಕನ್ನಡಿಗರ ಸ್ವಾಭಿಮಾನವನ್ನ ಕೆಣಕುತ್ತಿದ್ದಾರೆ. ಕರ್ನಾಟಕ ಬಂದ್ ಉದ್ದೇಶ ಸರಿಯಾಗಿದೆ, ಆದರೆ, ಸಮಯ ಸೂಕ್ತವಲ್ಲ, ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿವೆ. ಈಗ ಬಂದ್ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಂದ್ ಕಾರ್ಯಕ್ರಮ ಯಶಸ್ವಿಯಾಗಬೇಕು.
ಮರಾಠಿ ಪುಂಡರದು ಸದಾ ಇದೇ ರೀತಿಯ ಕಿರುಕುಳ ನೀಡುತ್ತಿದ್ದಾರೆ. ಬೆಳಗಾವಿ ನಮ್ನ ರಾಜ್ಯದ ಅವಿಭಾಜ್ಯ ಅಂಗವಾಗಿದೆ. ಭಾಷಾವಾರು ಪ್ರಾಂತಗಳ ವಿಂಗಡಣೆಯಾದಂದೆ ಬೆಳಗಾವಿ ಕನ್ನಡಿಗರು ಮತ್ತು ಕರ್ನಾಟಕಕ್ಕೆ ಸೇರಿದ್ದು ಎಂದು ನಿರ್ಧರಿಸಲಾಗಿದೆ. ಆದರೂ ಕೆಲವು ಎಂಇಎಸ್ ಪುಂಡರು ಪದೇ ಪದೇ ಕಾಲು ಕೆರೆದು ಜಗಳಕ್ಕೆ ಬರುತ್ತಿರುವುದು ಖಂಡನೀಯ ಎಂದರು.
ಉದ್ಯೋಗ ಅರಸಿ ಹೊರಗಿನಿಂದ ಬರುವ ಅನ್ಯ ಭಾಷಿಕರು, ಕನ್ನಡ ಭಾಷೆ ಕಲಿಯದೆ ಕನ್ನಡಿಗರ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆಸುತ್ತಿದ್ದಾರೆ. ಉತ್ತರ ಭಾರತದ ರಾಜ್ಯಗಳು ದಕ್ಷಿಣದ ಮೇಲೆ ಹಿಂದಿ ಹೇರಿಕೆ ಮಾಡುತ್ತಿವೆ. ಇನ್ನು ಕ್ವೀನ್ ಸಿಟಿ ಹೆಸರಲ್ಲಿ ನಮ್ಮ ಭೂಮಿ ಮಾರ್ವಾಡಿಗಳ ಪಾಲಾಗುತ್ತಿದೆ. ಆಳುವ ಸರ್ಕಾರಗಳು ರೈತರು, ಕಾರ್ಮಿಕರ ಹೆಸರಲ್ಲಿ ಬಹುರಾಷ್ಟ್ರೀಯ ಕಂಪನಿಗಳಿಗೆ ಬೃಹತ್ ಸಬ್ಸಿಡಿ ನೀಡುತ್ತಿವೆ. ರೈತರ ಸಾಲ ಮನ್ನಾ ಮಾಡದ, ಬೆಳೆದ ಧಾನ್ಯಗಳಿಗೆ ವೈಜ್ಞಾನಿಕವಾಗಿ ಬೆಂಬಲ ಬೆಲೆ ಘೋಷಣೆ ಮಾಡದ ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ದೇಶದ 26 ಉದ್ಯಮಪತಿಗಳ 16 ಲಕ್ಷಕೋಟಿ ಸಾಲದ ಹಣವನ್ನು ರೈಟಪ್ ( ವಸೂಲಾಗದ ಸಾಲ ) ಮಾಡಿದೆ. ಇದು ಈ ದೇಶದ ದುಡಿಯುವ ಜನರಿಗೆ ಮಾಡಿದ ದ್ರೋಹವಾಗಿದೆ ಎಂದು ಆಕ್ರೋಶ ಹೊರ ಹಾಕಿದರು.
ರಾಜ್ಯದ ಜ್ವಲಂತ ಸಮಸ್ಯೆಗಳು ಎದುರಾದಾಗ ತಾಲ್ಲೂಕಿನ ಹಲವಾರು ಕನ್ನಡಪರ, ದಲಿತ, ರೈತ ಮತ್ತು ಕಾರ್ಮಿಕ ಸಂಘಟನೆಗಳು ಧ್ವನಿಯೆತ್ತಿವೆ. ಪ್ರಮುಖವಾಗಿ ದೊಡ್ಡಬಳ್ಳಾಪುರದ ಜನತೆ ನೇಕಾರಿಕೆಯನ್ನೇ ತಮ್ಮ ಬದುಕಾಗಿಸಿಕೊಂಡಿದ್ದಾರೆ. ಯುಗಾದಿ ಹಬ್ಬ ಹತ್ತಿರದಲ್ಲಿದೆ, ವ್ಯಾಪಾರಿಗಳ ಒಂದು ದಿನದ ವಹಿವಾಟುಗಳು ನಿಂತರೆ ಅದು ಆರ್ಥಿಕವಾಗಿ ಬೇರೆ ರೀತಿಯ ಪರಿಣಾಮ ಬೀರುತ್ತದೆ.
ಜನಸಾಮಾನ್ಯರು, ಕಾರ್ಮಿಕರು ವರ್ತಕರ ಬೆಂಬಲ ಪಡೆಯಬೇಕು ಅವರಿಗೂ ಸ್ಫಂದಿಸಬೇಕು, ಹಾಗಾಗಿ ಕರ್ನಾಟಕ ಬಂದ್ ಬೆಂಬಲಿಸಿ ಬೃಹತ್ ಪ್ರತಿಭಟನೆ ನಡೆಸುವುದೆಂದು ನಿರ್ಧರಿಸಿದರು.
ಮನವಿ ಸಲ್ಲಿಕೆ :
ಮಾರ್ಚ್ 22 ರಂದು ತಿಂಗಳ ನಾಲ್ಕನೇ ಶನಿವಾರ ಆದ ಕಾರಣ, ಶುಕ್ರವಾರದಂದು ತಹಶೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಕನ್ನಡ ಪಕ್ಷದ ರಾಜ್ಯ ಮುಖಂಡ ಸಂಜೀವ ನಾಯಕ್, ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಅಂಜನೇಯ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ಕರ್ನಾಟಕ ರಾಜ್ಯ ರೈತ ಸಂಘದ ಮುತ್ತೇಗೌಡ, ಪ್ರಸನ್ನ, ಡಾ.ರಾಜ್‌ಕುಮಾರ್ ಆಭಿಮಾನಿಗಳ ಸಂಘದ ಸು.ನರಸಿಂಹ ಮೂರ್ತಿ, ಪರಮೇಶ್, ಭುವನೇಶ್ವರಿ ಕನ್ನಡ ಸಂಘದ ನವೀನ್, ಮುಖಂಡರಾದ ತಿಮ್ಮರಾಜು, ಸುರೇಶ್, ರಮೇಶ್, ನಾಗರಾಜು, ವೆಂಕಟೇಶ್, ಮುನಿಪಾಪಯ್ಯ, ರಾಜಣ್ಣ, ಹೆಚ್. ಮಂಜುನಾಥ್, ಪತ್ರಕರ್ತ ಡಿ.ಶ್ರೀಕಾಂತ್, ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…