ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಶಿಧರ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಇದಕ್ಕೆ ನಮ್ಮ ವಿರೋಧವಿದೆ. ಈಗಾಗಲೇ ಸಾಕಷ್ಟು ಹೋರಾಟಗಳನ್ನು ಮಾಡಿದ್ದೇವೆ. ಮುಂದುವರಿದು ಮಾ.31 (ಮಂಗಳವಾರ) ರಂದು ಚಿಕ್ಕಬೆಳವಂಗಲದಿಂದ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ. ಸುಮಾರು 100 ಟ್ಯಾಕ್ಟರ್ ಗಳು ಬರಲಿವೆ.. ಈ ಟ್ರ್ಯಾಕ್ಟರ್ ಛಲೋದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಬೇಕು ಎಂದರು..
ಸರ್ಕಾರ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಮುಂದಾಗಿದೆ. ನಮ್ಮ ಜಮೀನುಗಳನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ. ನಾವು ನಮ್ಮ ಭೂಮಿಯಲ್ಲಿ ಅಡಿಕೆ, ತೆಂಗು, ಸೀಬೆ, ದ್ರಾಕ್ಷಿ, ರಾಗಿ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಇಂತಹ ಭೂಮಿಯನ್ನು ನಮ್ಮಂದಿ ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು…
ರೈತ ದೇಶದ ಬೆನ್ನೆಲುಬು, ಎಲ್ಲಾ ಸರ್ಕಾರಗಳು ರೈತರಿಂದ ಭೂಮಿಯನ್ನು ಬಲವಂತವಾಗಿ ಕಬಳಿಸಿ ರೈತರ ಬೆನ್ನು ಮುರಿಯುವ ಕೆಲಸ ಮಾಡುತ್ತಿವೆ. ನಮ್ಮ ಭೂಮಿ ನಮ್ಮ ಹಕ್ಕು, ನಮ್ಮ ಪರಿಸರ ಸಮತೋಲನವಾಗಿರಬೇಕು ಎಂದರು.
ಈಗಾಗಲೇ ಶಾಸಕ ಧೀರಜ್ ಮುನಿರಾಜದ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಜೆಡಿಎಸ್ ಮುಖಂಡ ಬಿ.ಮುನೇಗೌಡ ಸೇರಿದಂತೆ ಚನ್ನರಾಯಪಟ್ಟಣ ರೈತ ಹೋರಾಟಗಾರು, ವಿವಿಧ ಸಂಘಟನೆಗಳ ಪ್ರಮುಖರು ಹೋರಾಟಕ್ಕೆ ಬೆಂಬಲ ನೀಡಿದ್ದಾರೆ ಎಂದರು..
ನಂತರ ರೈತ ಕೇಶವ ಕುಮಾರ್ ಮಾತನಾಡಿ, ನಾನು ವ್ಯವಸಾಯದಲ್ಲೇ ನನ್ನ ಜೀವನ ಕಟ್ಟಿಕೊಂಡಿದ್ದೇನೆ. ಸರ್ಕಾರವು ರೈತರಿಗೆ ಹಿಂಸೆ ನೀಡಿ ಬಲವಂತವಾಗಿ ಭೂಮಿ ಕಬಳಿಕೆ ಮಾಡಲು ಮುಂದಾಗಿದೆ.. ಬೇರೆ ದೇಶಗಳ ಕಂಪನಿಗಳಿಗೋಸ್ಕರ ನಮ್ಮ ಫಲವತ್ತಾದ ಜಮೀನು ಕಬಳಿಕೆ ಮಾಡಲಾಗುತ್ತಿದೆ.. ನಮ್ಮ ಊಟದ ತಟ್ಟೆಯನ್ನು ಸರ್ಕಾರ ಕಿತ್ತುಕೊಳ್ಳುತ್ತಿದೆ. ಎಲ್ಲೂ ಸಹ ಬಲವಂತವಾಗಿ ಭೂಮಿ ಕಸಿದುಕೊಳ್ಳಬಾರದು ಎಂದರು…
ಸುನೀಲ್ ಕುಮಾರ್, ತಿಮ್ಮೇಗೌಡ, ಪ್ರಭಾ, ರಾಮಕೃಷ್ಣಯ್ಯ, ಮನು, ಕೆಂಪೇಗೌಡ ಸೇರಿಂದರೆ ಸಮಿತಿ ಮುಖಂಡರು, ರೈತರು ಇದ್ದರು…
ನಿಮ್ಮ ವಾರ್ಷಿಕ ಭವಿಷ್ಯ...... ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ........ ಇಂದು ಮಾರ್ಚ್ 29, 2026/2027 ರವರೆಗೆ ಈ ಯುಗಾದಿಯಿಂದ ಪ್ರಾರಂಭವಾಗುವ…
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಸಾಧಾರಣ ಸೇವೆ ಹಾಗೂ ದಕ್ಷತೆ ತೋರಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 2025ನೇ ಸಾಲಿನ…
ನಾಳೆ (ಭಾನುವಾರ) ನಡೆಯಬೇಕಿದ್ದ ಶ್ರೀರಾಮ ಶೋಭಾಯಾತ್ರೆ ಆಚರಣೆಗೆ ಡಿಜೆ ಬಳಕೆ ಅನುಮತಿ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತು ಆಯೋಜಕರಾದ ಬಜರಂಗದಳ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ತನಿಖಾಧಿಕಾರಿಯಾಗಿದ್ದ ಸಬ್ ಇನ್ಸ್ ಪೆಕ್ಟರ್ ವಿ.ವರಲಕ್ಷ್ಮಿ ಅವರು ವರ್ಗಾವಣೆಗೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ…
ಶ್ರೀರಾಮ ಶೋಭಾಯಾತ್ರೆಗೆ ಡಿಜೆ ಪರ್ಮಿಷನ್ ಕೊಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ನಗರದ ಡಿವೈಎಸ್ಪಿ ಕಚೇರಿ ಎದುರು ಶ್ರೀರಾಮ ಭಜನೆ ಮಾಡುತ್ತಾ ಹಿಂದೂ…
ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು…