ಬಂಗಾಳಕೊಲ್ಲಿಯಲ್ಲಿ ಮಿಚಾಂಗ್ ಚಂಡಮಾರುತ ರೂಪುಗೊಂಡಿರುವ ಹಿನ್ನೆಲೆ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಹಲವು ಭಾಗಗಳಲ್ಲಿ ಮಳೆ, ಮೋಡಕವಿದ ವಾತಾವರಣ, ಬಿರುಗಾಳಿ ಸೃಷ್ಟಿಯಾಗಿದೆ.
ಮಿಚಾಂಗ್ ಚಂಡಮಾರುತದ ಪರಿಣಾಮ ತಾಲೂಕಿನ ಬೈರಾಪುರ ತಾಂಡಾದಲ್ಲಿ ವಿದ್ಯುತ್ ಕಂಬದ ಮೇಲೆ ಬೃಹತ್ ಆಕಾರದ ತೆಂಗಿನ ಮರ ಬಿದ್ದ ಕಾರಣ ನಾಲ್ಕು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಇದರ ಜೊತೆಗೆ ಮನೆ ಗೋಡೆಯು ಸಹ ಕುಸಿತಗೊಂಡಿದೆ. ಮನೆಯಲ್ಲಿ ಇದ್ದವರು ಕೂದಲೆಳೆಯಲ್ಲಿ ಪ್ರಾಣಾಯಾಮದಿಂದ ಪಾರಾಗಿದ್ದಾರೆ.ಬೈಕ್ ನಲ್ಲಿ ತೆರಳುತ್ತಿದ್ದ ಯುವಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಕೂಡಲೆ ಸ್ಥಳೀಯರು ಬೆಸ್ಕಾಂ ಸಿಬ್ಬಂದಿಗೆ ವಿಷಯ ತಿಳಿಸಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ್ದಾರೆ.