ಮಿಷನ್ ಇಂದ್ರಧನುಷ್ 5.0 3ನೇ ಸುತ್ತಿನ ಲಸಿಕಾಕರಣ ಗುರಿ ತಲುಪಲು ಕ್ರಮ ವಹಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್

2023 ರ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮದ ಭಾಗವಾಗಿ ಮೂರನೇ ಸುತ್ತಿನ ಲಸಿಕಾಕರಣ ಅಕ್ಟೋಬರ್  9 ರಿಂದ 15 ರವರಿಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಶೇಕಡ 100 ರಷ್ಟು ಗುರಿ ತಲುಪಲು ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಮಿಷನ್ ಇಂದ್ರಧನುಷ್ 5.0 ಮೂರನೇ ಸುತ್ತಿನ ಲಸಿಕಾಕರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2023 ರ ಮಿಷನ್ ಇಂದ್ರಧನುಷ್ 5.0 ಎರಡನೇ ಸುತ್ತಿನ ಲಸಿಕಾಕರಣ ಪ್ರಗತಿ ಪರಿಶೀಲನೆ ನಡೆಸಿದ ಅವರು ಯು.ವಿನ್(U-WIN) ತಂತ್ರಾಂಶದ ವರದಿಯಂತೆ ಸೆಪ್ಟೆಂಬರ್ 11 ರಿಂದ 16 ರವರೆಗೆ ನಡೆದ ಎರಡನೇ ಸುತ್ತಿನ ಲಸಿಕಾಕರಣದಲ್ಲಿ ಜಿಲ್ಲೆಯಲ್ಲಿ ಐದು ವರ್ಷದ ಒಳಗಿನ 2340 ಮಕ್ಕಳಿಗೆ ಹಾಗೂ 644 ಗರ್ಭಿಣಿ ಮಹಿಳೆಯರಿಗೆ ಲಸಿಕೆಯನ್ನು ನೀಡಲಾಗಿದೆ. ಎರಡನೇ ಸುತ್ತಿನಲ್ಲಿ ಶೇಕಡ 100 ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಲಾಗಿದೆ ಎಂದರು.

2023ರ ಮಿಷನ್ ಇಂದ್ರಧನುಷ್ 5.0 ಮೂರನೇ ಸುತ್ತಿನಲ್ಲಿ ಲಸಿಕಾಕರಣ ಕ್ಯಾಂಪ್ ಮಾಡುವ ಮುಂಚಿತವಾಗಿ ಹೆಚ್ಚು ಪ್ರಚಾರ ಮಾಡಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ದಿನಾಂಕವನ್ನು ತಿಳಿಸಬೇಕು.

ವಲಸೆ ಪ್ರದೇಶಗಳಲ್ಲಿ, ನಗರದ ಸ್ಲಂ ಪ್ರದೇಶದಲ್ಲಿ ಹೆಚ್ಚು ಗಮನ ಹರಿಸಿ ಲಸಿಕಾಕರಣ ಮಾಡಬೇಕು. ಮೊದಲ ಹಾಗೂ ಎರಡನೇ ಸುತ್ತಿನಲ್ಲಿ ಲಸಿಕೆ ಪಡೆಯದ  5 ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಿಗೆ ಮೂರನೇ ಸುತ್ತಿನಲ್ಲಿ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಲು ಕ್ರಮ ವಹಿಸಿ, ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಮಿಷನ್ ಇಂದ್ರಧನುಷ್ 5.0 ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಸೀಮಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

8 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

21 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

22 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago