ಮುಂಗಾರು ಮಳೆ ಕೊರತೆ ಉಂಟಾದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್

2023 ರ ಮುಂಗಾರು ಮುಳೆಯು ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಕೊರತೆ ಉಂಟಾದಲ್ಲಿ, ಮಳೆ ಕೊರತೆಯಿಂದ ಆಗಬಹುದಾದ ಸಮಸ್ಯೆಗಳನ್ನು ನಿರ್ವಹಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಶಿವಶಂಕರ್. ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮುಂಗಾರು ಮಳೆ ಕೊರತೆಯಿಂದ ಉಂಟಾಗುವ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳೆಹಾನಿ ಕುರಿತ ಪ್ರಗತಿ ಪರಿಶೀಲನೆ ನಡೆಸಿ, 2023 ರ ಮುಂಗಾರು ಮಳೆ ಕಡಿಮೆ ಪ್ರಮಾಣದಲ್ಲಿ ಬೀಳುತ್ತಿದೆ. ಹೀಗಾಗಿ ಕೃಷಿ, ತೋಟಗಾರಿಕೆ ಬೆಳೆಗಳ ಸ್ಥಿತಿ ಗತಿ ಬಗ್ಗೆ ಮಾಹಿತಿ ಸಂಗ್ರಹಿಸಿ, ಕೆರೆ, ಕುಂಟೆಗಳಲ್ಲಿ ನೀರಿನ ಮಟ್ಟವನ್ನು ಪರಿಶೀಲಿಸಿ, ದನ, ಕರುಗಳಿಗೆ ಮೇವು ಹಾಗೂ ಆಹಾರ ಪೂರೈಕೆಯ ವ್ಯವಸ್ಥೆ ಬಗ್ಗೆ ಗಮನ ಹರಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ತೊಂದರೆ ಆಗದಂತೆ ನೋಡಿಕೊಂಡು ಅಗತ್ಯ ವಿರುವ ಕಡೆ ಕೊಳವೆ ಬಾವಿಗಳನ್ನು ಕೊರೆಯಿಸಿ ನೀರು ಪೂರೈಸಬೇಕು. ಕುಡಿಯುವ ನೀರು ಪೂರೈಕೆಯ ಪೈಪ್ ಲೈನ್ ಗಳು ಚರಂಡಿಗಳಲ್ಲಿ ಹಾದು ಹೋಗಿದ್ದರೆ ಅಂತಹ ಪೈಪ್ ಲೈನ್ ಗಳನ್ನು ಶೀಘ್ರವೇ ಬೇರೆ ಕಡೆ ಸ್ಥಳಾಂತರಿಸಿ ಎಂದು ಹೇಳಿದರು.

ಕಾರ್ಖಾನೆಗಳು ಅವೈಜ್ಞಾನಿಕವಾಗಿ ತ್ಯಾಜ್ಯ ಎಲ್ಲೆಂದರಲ್ಲಿ ಸುರಿಯುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಅಂತಹ ದೂರುಗಳು ಬಂದಲ್ಲಿ ತಹಶೀಲ್ದಾರ್ ಗಳು ಶೀಘ್ರ ಕ್ರಮಕೈಗೊಳ್ಳಬೇಕೆಂದರು.

ಕಾರ್ಖಾನೆಗಳು ಪ್ರತಿ ತಿಂಗಳು ಹಾಗೂ ದ್ವೈವಾರ್ಷಿಕ ಪ್ರಾತ್ಯಕ್ಷಿಕೆ ಅಣಕು ಪ್ರದರ್ಶನವನ್ನು ನಿಗದಿಯಂತೆ ಕಡ್ಡಾಯವಾಗಿ ಏರ್ಪಡಿಸಿ ವರದಿ ನೀಡಿ ಎಂದು ಕಾರ್ಖಾನೆಗಳ ಮುಖ್ಯಸ್ಥರಿಗೆ ಸೂಚಿಸಿದರು.

ಅಕ್ರಮ ಎಲ್.ಪಿ.ಜಿ ಸಿಲಿಂಡರ್ ಸಂಗ್ರಹಣೆ, ರೀ ಫಿಲ್ಲಿಂಗ್, ಸಾಗಾಣಿಕೆ, ಅಪಾಯಕಾರಿ ರಾಸಾಯನಿಕಗಳ ಸಂಗ್ರಹಣೆ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಂಡು, ಅಂತಹ ಚಟುವಟಿಕೆಗಳು ನಡೆಯುವ ಪ್ರದೇಶಗಳ ಮೇಲೆ ದಾಳಿ ನಡೆಸಿ ಕಾನೂನು ಕ್ರಮಕೈಗೊಂಡು ಮುಚ್ಚಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ಬಸವರಾಜು ವಿ, ಕಾರ್ಖಾನೆಗಳ ಉಪನಿರ್ದೇಶಕರಾದ ನರಸಿಂಹಮೂರ್ತಿ(ಹೊಸಕೋಟೆ), ತಿಮ್ಮರಾಜು(ನೆಲಮಂಗಲ), ಎನ್.ಡಿ.ಆರ್.ಎಫ್ ನ ಸಹಾಯಕ ಕಮಾಂಡೆಟ್ ಸಂತೀಲ್ ಕುಮಾರ್, ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಮುಖ್ಯಸ್ಥರು ಹೊನ್ನೇಗೌಡ, ಜಿಲ್ಲಾ ಉಪ ಪೋಲಿಸ್ ಅಧೀಕ್ಷಕ ರವಿ ಪಿ,ಕಾರ್ಖಾನೆಗಳ ಮುಖ್ಯಸ್ಥರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

50 minutes ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

55 minutes ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

2 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

3 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

8 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

8 hours ago