ಮುಂಗಾರು 2023ರ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಮನವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 20 (ಕರ್ನಾಟಕ ವಾರ್ತೆ)- ಕೇಂದ್ರ ಸರ್ಕಾರವು 2023 ರ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲು ಮಂಜೂರಾತಿಯನ್ನು ನೀಡಿದ್ದು, ಕರ್ನಾಟಕ ರಾಜ್ಯದಲ್ಲಿ ಈ ಯೋಜನೆಯನ್ನು “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ” ಎಂದು ಅನುಷ್ಠಾನಗೊಳಿಸಲಾಗುತ್ತಿದೆ.

2023ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧಿಸೂಚಿತ ಬೆಳೆಗಳಾದ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ), ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ ಮತ್ತು ನೀರಾವರಿ), ತೊಗರಿ (ಮಳೆಯಾಶ್ರಿತ ಮತ್ತು ನೀರಾವರಿ), ಹುರುಳಿ (ಮಳೆಯಾಶ್ರಿತ), ನೆಲಗಡಲೆ (ಮಳೆಯಾಶ್ರಿತ) ಮತ್ತು ಟೊಮ್ಯಾಟೊ ಬೆಳೆಗಳನ್ನು ಬೆಳೆಯುವ ರೈತರು ಈ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿರುತ್ತದೆ. ಬೆಳೆ ಸಾಲ ಪಡೆಯದ ಹಾಗೂ ಬೆಳೆ ಸಾಲ ಪಡೆದ ರೈತರಿಗೆ ಈ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಲು ಆಯ್ಕೆಯ ಅವಕಾಶವಿದೆ.

ಯೋಜನೆಯ ಉದ್ದೇಶ

ವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ/ನಾಟಿ ವಿಫಲಗೊಂಡಲ್ಲಿ ವಿಮಾ ರಕ್ಷಣೆ ಒದಗಿಸುವುದು.
ಹಾಲಿ ಇರುವ ಬೆಳೆಗಳಿಗೆ (ಬಿತ್ತನೆಯಿಂದ ಕಟಾವಿನ ಹಂತದವರೆಗೆ) ಬರ/ಶುಷ್ಕ ಪರಿಸ್ಥಿತಿ, ನೆರೆ/ಪ್ರವಾಹಗಳಿಂದ ಬೆಳೆ ಮುಳಗಡೆ, ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ, ಭೂಕುಸಿತ, ಬಿರುಗಾಳಿ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸಲಾಗುತ್ತದೆ.

ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (14 ದಿನಗಳವರೆಗೆ) ಆಲಿಕಲ್ಲು ಮಳೆ, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ, ನಷ್ಟದ ನಿರ್ಧಾರಣೆಯನ್ನು ವ್ಯಕ್ತಿಗತ ತಾಕು/ಹೊಲದ ಆಧಾರದ ಮೇಲೆ ನಿರ್ಧರಿಸಿ ನಷ್ಟ ಪರಿಹಾರವನ್ನು ಒದಗಿಸಲಾಗುತ್ತದೆ.

ನೆಲಗಡಲೆ (ಮಳೆಆಶ್ರಿತ) ಬೆಳೆಗೆ 31.07.2023, ರಾಗಿ (ಮಳೆ ಆಶ್ರಿತ), ರಾಗಿ (ನೀರಾವರಿ), ಭತ್ತ (ನೀರಾವರಿ), ಮು.ಜೋಳ(ನೀರಾವರಿ), ಮು.ಜೋಳ(ಮಳೆಆಶ್ರಿತ), ಹುರುಳಿ (ಮಳೆಆಶ್ರಿತ) ಬೆಳೆಗಳಿಗೆ ನೋಂದಣಿಗೆ  ಕೊನೆಯ ದಿನಾಂಕ 16.08.2023 ಆಗಿರುತ್ತದೆ.

ಗಮನಿಸಬೇಕಾದ ಅಂಶಗಳು

ಬೆಳೆ ವಿಮೆ ನೋಂದಣಿಗೆ ಫ್ರೂಟ್ಸ್ (FRUITS ID) ಗುರುತಿನ ಸಂಖ್ಯೆ ಕಡ್ಡಾಯವಾಗಿದ್ದು, ರೈತರು ವಿಮಾ ಕಂತಿನ ಹಣವನ್ನು ಪ್ರಸ್ತಾವನೆಗಳೊಂದಿಗೆ ಹತ್ತಿರದ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ (Common Service Center), ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ  ವಿಮಾ ಪ್ರಸ್ತಾವನೆ, ಪಹಣಿ/ಖಾತೆ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸಿಕೊಳ್ಳುವುದು.

ರಿಲಯನ್ಸ್ ಜನರಲ್ ಇನ್ಶೂರನ್ಸ್ ಕಂಪನಿ ಲಿ. ಆಯ್ಕೆಯಾಗಿದ್ದು, ಟೋಲ್ ಪ್ರೀ ಸಂಖ್ಯೆ 1800 102 4088 ಗೆ ಸಂಪರ್ಕಿಸಬಹುದಾಗಿದೆ, ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಗಳ ದೂರವಾಣಿ ಸಂಖ್ಯೆ‌ ಜಿಲ್ಲಾ ಪ್ರತಿನಿಧಿ ಅಶೋಕ್ ಕುಮಾರ್ ರೆಡ್ಡಿ, +918655821851, ತಾಲ್ಲೂಕು ಪ್ರತಿನಿಧಿಗಳು: ದೇವನಹಳ್ಳಿ: ಕಾಂತಕುಮಾರ್ : 9341627547, ದೊಡ್ಡಬಳ್ಳಾಪುರ: ರವಿಶಂಕರ್ : 9620838348, ಹೊಸಕೋಟೆ: ಶ್ರೀನಿವಾಸ ಮೂರ್ತಿ: 9900450778, ನೆಲಮಂಗಲ: ಕುಮಾರಸ್ವಾಮಿ : 8618812813 ಇವರನ್ನು ಸಂಪರ್ಕಿಸುವುದು.

ಹೆಚ್ಚಿನ ವಿವರಗಳಿಗೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಯನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

10 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

14 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

16 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

16 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

18 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

22 hours ago