ಪ್ರತಿ ವರ್ಷವೂ ಬಿಸಿಲಿನ ತಾಪಮಾನ ಏರಿಕೆಯಾಗುತ್ತಲೇ ಇದೆ. ಇದನ್ನು ತಗ್ಗಿಸಲು ಅರಣ್ಯ ಹಾಗೂ ಪ್ರಾಕೃತಿಕ ಸಂಪತ್ತು ಹೆಚ್ಚು ಮಾಡಲೇಬೇಕಾದ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಅರವಿಂದ ಸಾಯಿಬಣ್ಣ ಹಾಗರಗಿ ಹೇಳಿದರು.
ನಗರದ ನ್ಯಾಯಾಲಯದ ಸಮೀಪ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಹಾಗೂ ವಯೋವೃದ್ಧರ ಹಿತರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ‘ಊರಿಗೊಂದು ವನ ಊರಿಗೊಂದು ಕೆರೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು.
ಅರಣ್ಯ ಪ್ರದೇಶ ಕಡಿಮೆಯಾಗುತ್ತಿದ್ದು ಮುಂದಿನ ಪೀಳಿಗೆಯ ದೃಷ್ಟಿಯಿಂದ ವನ ಸಂಪತ್ತು ಹೆಚ್ಚಾಗಬೇಕಿದೆ. ಆದರೆ ಇದು ಅರಣ್ಯ ಇಲಾಖೆಯ ಕಾರ್ಯವಷ್ಟೇ ಅಲ್ಲದೇ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರಕೃತಿಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದರು.
ಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆಯಿದೆ. ಬಾಲ ಕಾರ್ಮಿಕ ಪದ್ಧತಿ ಸಹ ಮಕ್ಕಳ ಮೇಲಿನ ಶೋಷಣೆಯ ಭಾಗವೇ ಆಗಿದೆ. ಇತ್ತೀಚೆಗೆ ಬಂದ ಯುಪಿಎಸ್‌ಸಿ ಫಲಿತಾಂಶದಲ್ಲಿ 25 ರಲ್ಲಿ 5 ಮಂದಿ ಕೆಳಸ್ತರದಿಂದ ಬಂದವರಾಗಿದ್ದು, ಶಿಕ್ಷಣಕ್ಕೆ ಒತ್ತು ನೀಡಿದರೆ ಎಂತಹ ಸಾಧನೆಯನ್ನಾದರೂ ಮಾಡುತ್ತಾರೆ ಎನ್ನುವುದಕ್ಕೆ ನಿದರ್ಶನವಾಗಿದೆ ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ.ಆರ್.ದೀಪ ಮಾತನಾಡಿ, ಊರಿಗೊಂದು ವನ ಊರಿಗೊಂದು ಕೆರೆ ಕಾರ್ಯಕ್ರಮ ಜಿಲ್ಲೆಯಾದ್ಯಂತ 7 ಸಾವಿರ ಕಾರ್ಯಕ್ರಮ ನಡೆಯುತ್ತಿವೆ. ತಾಲ್ಲೂಕಿನಲ್ಲಿ 3 ಸಾವಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಿಡಗಳನ್ನು ನೆಡುವುದರ ಜತೆಗೆ ಪೋಷಣೆ ಮಾಡಬೇಕು. ಕೆರೆಗಳ ಮಲಿನವನ್ನು ತಡೆಯಬೇಕಿದೆ. ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಜಾರಿಗೆ ತಂದಿರುವ ಪೋಕ್ಸೊ ಕಾಯ್ದೆ ಬಗ್ಗೆ ಹೆಚ್ಚಿನ ಅರಿವು ಅಗತ್ಯವಿದೆ. 18 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನಲ್ಲಿ ಮದುವೆ ಮಾಡಿದರೆ ಪೋಷಕರಾದಿಯಾಗಿ ಮದುವೆ ಮಾಡಿಸಿದವರೂ ಶಿಕ್ಷೆಗೆ ಒಳಗಾಗುತ್ತಾರೆ. ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದರು.
ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಂ.ಸುಷ್ಮಾ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಭಾರತಿ ಶ್ಯಾಮರಾಜ್ ಇದ್ದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…