ಮುಂದಿನ 2 ದಿನಗಳ ಕಾಲ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ನಿಧಾನವಾಗಿ ಉತ್ತರ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮುಂದಿನ 2 ದಿನಗಳ ಕಾಲ ಅಂದರೆ ಅಕ್ಟೋಬರ್ 25 ರಿಂದ 26 ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ ವಹಿಸಲು ಸೂಚಿಸಿದೆ.

ಕೃಷಿಕರು ಮಳೆ, ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು. ಸಾರ್ವಜನಿಕರು,ಮಕ್ಕಳು,ಕಾರ್ಮಿಕರು ಸಿಡಿಲು ಬಡಿಯುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು. ಕಟ್ಟಡಗಳ ಮೇಲೆ ಅಪಾಯಕಾರಿ ರೆಂಬೆ-ಕೊಂಬೆಗಳಿದ್ದಲ್ಲಿ ಮೊದಲೇ ಕತ್ತರಿಸಿ ವಾಸಿಸುವ ಕಟ್ಟಡಗಳನ್ನು ರಕ್ಷಿಸಿಕೊಳ್ಳುವುದು.

ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್‌ ತಂತಿಗಳಿಂದ ದೂರವಿರುವುದು. ದುರ್ಬಲವಾದ / ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ / ಮರಗಳ ಕೆಳಗೆ ನಿಲ್ಲಬಾರದು.

ಮಳೆಯಿಂದಾಗಿ ಯಾವುದೇ ಪ್ರದೇಶದಲ್ಲಿ ಮರಗಳು ಬಿದ್ದಲ್ಲಿ ಅರಣ್ಯ ಇಲಾಖೆಯ ಸಹಾಯವಾಣಿ ಸಂಖ್ಯೆ 1926 ಕರೆ ಮಾಡಿ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಸಂಪರ್ಕಕ್ಕಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಸಹಾಯವಾಣಿ ಸಂಖ್ಯೆ 080-28388005 ಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!