ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರೆದಿದ್ದು, ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಮೀಪವಿರುವ ಪಾಲ್ ಪಾಲ್ ದಿನ್ನೆ ಗ್ರಾಮದ ಹೊರವಲಯದಲ್ಲಿರುವ ಕಾಡಿನಂಚಿನಲ್ಲಿ ನಿನ್ನೆ ಮಧ್ಯಾಹ್ನ ಮೇಕೆಯೊಂದರ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿದೆ. ಇಂದು ಮೃತ ಮೇಕೆ ಪತ್ತೆಯಾಗಿದೆ.
ರೈತ ಲಕ್ಷ್ಮಣ್ ಎಂದಿನಂತೆ ಬುಧವಾರವು(ಆ.9) ತನ್ನ ಮೇಕೆಗಳನ್ನು ಮೇಯಿಸಲು ಗ್ರಾಮದ ಹೊರವಲಯದಲ್ಲಿರುವ ಕಾಡಿಗೆ ಹೋಗಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಹೊಂಚು ಹಾಕಿ ಮೇಕೆ ಮೇಲೆ ಎರಗಿ ಬಲಿ ಪಡೆದಿರುವ ಚಿರತೆ. ನಿನ್ನೆ ಸಂಜೆ ಮನೆಗೆ ಬಂದು ನೋಡಿದಾಗ ಒಂದು ಮೇಕೆ ನಾಪತ್ತೆಯಾಗಿರುವುದು ರೈತ ಲಕ್ಷ್ಮಣ್ ಗಮನಕ್ಕೆ ಬಂದಿದೆ. ಇಂದು ಕಾಡೆಲ್ಲಾ ಹುಡುಕಾಡಿದ ಸಂದರ್ಭದಲ್ಲಿ ಕಾಡಿನ ಪಕ್ಕದಲ್ಲೇ ಇರುವ ಕೆರೆ ಬಳಿ ಮೃತ ಮೇಕೆ ಪತ್ತೆಯಾಗಿದೆ.
ಈ ಕುರಿತು ಕೂಡಲೇ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿದೆ, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಹಾವಳಿಗೆ ಬೆಚ್ಚಿಬಿದ್ದಿರುವ ಗ್ರಾಮಸ್ಥರು, ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಸಂಬಂಧಪಟ್ಟ ಇಲಾಖೆಗೆ ಒತ್ತಾಯಿಸಿದ್ದಾರೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…