ದೊಡ್ಡಬಳ್ಳಾಪುರ : ಪಶು ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದು, ರೈತರ ಮೇಲಿನ ಶೋಷಣೆ ನಿಲ್ಲದೆ ಹೋದರೆ ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಸನ್ನ ಅವರು ಎಚ್ಚರಿಕೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಂಎಫ್ ಒಕ್ಕೂಟ ರೈತರ ಪರ ಇಲ್ಲ, ಅಧಿಕಾರಿಗಳ ಪರವಾಗಿದೆ ಎಂದು ಆರೋಪಿಸಿ, ರೈತರ ಸಂಕಷ್ಟಗಳ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿಲ್ಲ. ನಾವು ನಮಗಾಗಿ ಡೈರಿಗೆ ಹಾಲು ಹಾಕುತ್ತಿಲ್ಲ, ಅಧಿಕಾರಿಗಳ ಹೊಟ್ಟೆ ತುಂಬಿಸಲು ಹಾಲು ಹಾಕುತ್ತಿದ್ದೇವೆ ಆಕ್ರೋಶ ವ್ಯಕ್ತಪಡಿಸಿದರು.
ಒಂದು ವೇಳೆ ಕೆಎಂಎಫ್ ಮುಚ್ಚುವ ಪರಿಸ್ಥಿತಿ ಏನಾದರೂ ಬಂದರೆ ಅದು ಅಧಿಕಾರಿಗಳ ಬೇಜವಾಬ್ದಾರಿತನದಿಂದಲೇ ಹೊರೆತು ಬೇರೆ ಕಾರಣದಿಂದಲ್ಲ ಎಂದರು.
ರೈತರ ಹೆಸರೇಳಿ ಅಧಿಕಾರಕ್ಕೆ ಬಂದ ಸರಕಾರಗಳು ರೈತರ ಪರ ಇಲ್ಲ, ರಾಜ್ಯದಲ್ಲಿ ಬರಗಾಲ ಎದುರಾಗಿದೆ. ಬರಗಲಕ್ಕೆ ಅನುಗುಣವಾಗಿ ಪಶುಪಾಲನೆಗೆ ಸಿಗಬೇಕಾದ ಸೌಲಭ್ಯ ರೈತರಿಗೆ ಸಿಗುತ್ತಿಲ್ಲ ಎಂದು ಆರೋಪಿಸಿದರು.
ರೈತರ ನಿರಂತರ ಹೋರಾಟದಿಂದ ಎಚ್ಚೆತ್ತ ಕೇಂದ್ರ ಸರ್ಕಾರ ಕಳೆದ 2020-21 ನೇ ಸಾಲಿನಲ್ಲಿ ರೈತ ವಿರೋಧಿ ಕಾಯ್ದೆ ರದ್ದು ಮಾಡಿತು. ಆದರೆ, ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಂಡ ರಾಜ್ಯದ ಯಡಿಯೂರಪ್ಪ ಅವರ ಸರ್ಕಾರ ವಿವಾಧಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲಿಲ್ಲ. ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಅಧಿಕಾರಕ್ಕೆ ಬಂದ ತಕ್ಷಣ ವಿವಾಧಿತ ಕೃಷಿ ಕಾಯ್ದೆ ವಾಪಸ್ ಪಡೆಯುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರವೂ ಸಹ ವಾಪಸ್ ತೆಗೆದುಕೊಂಡಿಲ್ಲ. ಇದು ಎಲ್ಲಾ ಪಕ್ಷಗಳು ಪರೋಕ್ಷವಾಗಿ ಬಹುರಾಷ್ಟ್ರೀಯ ಕಂಪನಿಗಳ ಪರ ಇವೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.
ದೆಹಲಿಯಲ್ಲಿ ಎಂಎಸ್ ಪಿ ಯನ್ನ ಕಾನೂನುಬದ್ಧ ಮಾಡಬೇಕು, ಹಾಗೂ ರೈತರ 14 ಉತ್ಪನ್ನಗಳನ್ನು ಖರೀದಿ ಮಾಡಬೇಕು ಎಂದು ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ, ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ರೈತರ ಮೇಲೆ ರಬ್ಬರ್ ಗುಂಡು ಹಾರಿಸಿ ಒಬ್ಬ ಯುವಕನನ್ನು ಕೊಂದಿದೆ ಎಂದು ಆರೋಪಿಸಿದ ಅವರು, ರೈತದ ಆತ್ಮಹತ್ಯೆಗಳು ಸರ್ಕಾರಗಳೇ ಮಾಡುವ ಕೊಲೆಗೆ ಸಮಾನ. ಆದರೆ ಪ್ರತಿಭಟನೆ ಹತ್ತಿಕ್ಕಲು ಗುಂಡು ಹಾರಿಸಿ ಕೊಲ್ಲುವುದು ರೈತರನ್ನು ಬಗ್ಗುಬಡಿಯುವ ಹುನ್ನಾರ ಎಂದು ಆಕ್ರೋಶ ಹೊರ ಹಾಕಿದರು.
ರೈತ ಮುಖಂಡ ಹಾಗೂ ವಕೀಲ ಸತೀಶ್ ಮಾತನಾಡಿ, ಆದಷ್ಟು ಬೇಗ ಮೇವಿನ ಕೇಂದ್ರಗಳನ್ನ ತೆರೆಯಬೇಕು. ಸ್ವಾಮೀನಾಥನ್ ವರದಿಯನ್ನ ಜಾರಿ ಮಾಡಬೇಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಕೊಬ್ಬರಿ ಖರೀದಿ ನೋಂದಣಿ ಕೇಂದ್ರವನ್ನ ತೆರೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಮೂರ್ತಿ, ಪ್ರಧಾನ ಕಾರ್ಯದರ್ಶಿ ಸತೀಶ್ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…