ಮುಂದುವರಿದ ರೈತರ ಮೇಲಿನ ಶೋಷಣೆ : ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯುವ ಎಚ್ಚರಿಕೆ..!?

ದೊಡ್ಡಬಳ್ಳಾಪುರ : ಪಶು ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದು, ರೈತರ ಮೇಲಿನ ಶೋಷಣೆ ನಿಲ್ಲದೆ ಹೋದರೆ ಪ್ರತ್ಯೇಕ ಖಾಸಗಿ ಹಾಲಿನ ಡೈರಿ ತೆರೆಯಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಸನ್ನ ಅವರು ಎಚ್ಚರಿಕೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಂಎಫ್ ಒಕ್ಕೂಟ ರೈತರ ಪರ ಇಲ್ಲ, ಅಧಿಕಾರಿಗಳ ಪರವಾಗಿದೆ ಎಂದು ಆರೋಪಿಸಿ, ರೈತರ ಸಂಕಷ್ಟಗಳ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತಿಲ್ಲ. ನಾವು ನಮಗಾಗಿ ಡೈರಿಗೆ ಹಾಲು ಹಾಕುತ್ತಿಲ್ಲ, ಅಧಿಕಾರಿಗಳ ಹೊಟ್ಟೆ ತುಂಬಿಸಲು ಹಾಲು ಹಾಕುತ್ತಿದ್ದೇವೆ ಆಕ್ರೋಶ ವ್ಯಕ್ತಪಡಿಸಿದರು.

ಒಂದು ವೇಳೆ ಕೆಎಂಎಫ್‌ ಮುಚ್ಚುವ ಪರಿಸ್ಥಿತಿ ಏನಾದರೂ ಬಂದರೆ ಅದು ಅಧಿಕಾರಿಗಳ ಬೇಜವಾಬ್ದಾರಿತನದಿಂದಲೇ ಹೊರೆತು ಬೇರೆ ಕಾರಣದಿಂದಲ್ಲ ಎಂದರು.

ರೈತರ ಹೆಸರೇಳಿ ಅಧಿಕಾರಕ್ಕೆ ಬಂದ ಸರಕಾರಗಳು ರೈತರ ಪರ ಇಲ್ಲ, ರಾಜ್ಯದಲ್ಲಿ ಬರಗಾಲ ಎದುರಾಗಿದೆ. ಬರಗಲಕ್ಕೆ ಅನುಗುಣವಾಗಿ ಪಶುಪಾಲನೆಗೆ ಸಿಗಬೇಕಾದ ಸೌಲಭ್ಯ ರೈತರಿಗೆ ಸಿಗುತ್ತಿಲ್ಲ ಎಂದು ಆರೋಪಿಸಿದರು.

ರೈತರ ನಿರಂತರ ಹೋರಾಟದಿಂದ ಎಚ್ಚೆತ್ತ ಕೇಂದ್ರ ಸರ್ಕಾರ ಕಳೆದ 2020-21 ನೇ‌ ಸಾಲಿನಲ್ಲಿ ರೈತ ವಿರೋಧಿ ಕಾಯ್ದೆ ರದ್ದು ಮಾಡಿತು. ಆದರೆ, ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಂಡ ರಾಜ್ಯದ ಯಡಿಯೂರಪ್ಪ ಅವರ ಸರ್ಕಾರ ವಿವಾಧಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲಿಲ್ಲ. ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಅಧಿಕಾರಕ್ಕೆ ಬಂದ ತಕ್ಷಣ ವಿವಾಧಿತ ಕೃಷಿ ಕಾಯ್ದೆ ವಾಪಸ್ ಪಡೆಯುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರವೂ ಸಹ ವಾಪಸ್ ತೆಗೆದುಕೊಂಡಿಲ್ಲ. ಇದು ಎಲ್ಲಾ ಪಕ್ಷಗಳು  ಪರೋಕ್ಷವಾಗಿ ಬಹುರಾಷ್ಟ್ರೀಯ ಕಂಪನಿಗಳ ಪರ ಇವೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ದೆಹಲಿಯಲ್ಲಿ ಎಂಎಸ್ ಪಿ ಯನ್ನ ಕಾನೂನುಬದ್ಧ ಮಾಡಬೇಕು, ಹಾಗೂ ರೈತರ 14 ಉತ್ಪನ್ನಗಳನ್ನು ಖರೀದಿ ಮಾಡಬೇಕು ಎಂದು ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ, ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ರೈತರ ಮೇಲೆ ರಬ್ಬರ್ ಗುಂಡು ಹಾರಿಸಿ ಒಬ್ಬ ಯುವಕನನ್ನು ಕೊಂದಿದೆ ಎಂದು ಆರೋಪಿಸಿದ ಅವರು, ರೈತದ ಆತ್ಮಹತ್ಯೆಗಳು ಸರ್ಕಾರಗಳೇ ಮಾಡುವ ಕೊಲೆ‌‌ಗೆ ಸಮಾನ. ಆದರೆ ಪ್ರತಿಭಟನೆ ಹತ್ತಿಕ್ಕಲು ಗುಂಡು ಹಾರಿಸಿ ಕೊಲ್ಲುವುದು ರೈತರನ್ನು ಬಗ್ಗುಬಡಿಯುವ ಹುನ್ನಾರ ಎಂದು ಆಕ್ರೋಶ ಹೊರ ಹಾಕಿದರು.

ರೈತ ಮುಖಂಡ ಹಾಗೂ ವಕೀಲ ಸತೀಶ್ ಮಾತನಾಡಿ, ಆದಷ್ಟು ಬೇಗ ಮೇವಿನ‌ ಕೇಂದ್ರಗಳನ್ನ ತೆರೆಯಬೇಕು. ಸ್ವಾಮೀನಾಥನ್ ವರದಿಯನ್ನ ಜಾರಿ ಮಾಡಬೇಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಕೊಬ್ಬರಿ ಖರೀದಿ ನೋಂದಣಿ ಕೇಂದ್ರವನ್ನ ತೆರೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಮೂರ್ತಿ, ಪ್ರಧಾನ ಕಾರ್ಯದರ್ಶಿ ಸತೀಶ್ ಸೇರಿದಂತೆ ರೈತ‌ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

17 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

22 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago