ಮುಂದುವರೆದ ಯಾವುದೇ ಜಾತಿಗಳನ್ನು ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು ಎಂದು ಆಗ್ರಹಿಸಿ ಪ್ರತಿಭಟನೆ

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಎಲ್ಲಾ ರೀತಿಯಿಂದ ಮುಂದುವರೆದ ಯಾವುದೇ ಜಾತಿಗಳನ್ನು ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ‌‌ ನಗರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡೆ ಖಂಡಿಸಿ ದಿಕ್ಕಾರದ ಘೋಷಣೆ ಕೂಗಿದರು. ದೇಶದಲ್ಲಿ ಮೀಸಲಾತಿಯನ್ನು ಅವಕಾಶ ವಂಚಿತ ಜಾತಿಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಸಾಮಾಜಿಕ ಸಮಾನತೆ ಸಾರಿದ ಅಗ್ರಗಣ್ಯ ರಾಜ್ಯಗಳಲ್ಲಿ ಕರ್ನಾಟಕವು ಒಂದು. ಅನೇಕ ಹಿಂದುಳಿದ ವರ್ಗಗಳ ಆಯೋಗಗಳು ವೈಜ್ಞಾನಿಕ ಆಧ್ಯಯನ ನಡೆಸಿ ಮೀಸಲಾತಿಯನ್ನು ಅಚ್ಚುಕಟ್ಟಾಗಿ ಜಾರಿ ಮಾಡಿವೆ. ಆದರೆ, ಕೆಲ ರಾಜಕೀಯ ತೀರ್ಮಾನಗಳಿಂದಾಗಿ ಬಲಾಡ್ಯರು ಮೀಸಲಾತಿ ಪಡೆದು ಶೋಷಿತರ ಪಾಲು ಕಬಳಿಸುತ್ತಿರುವುದು ಶೋಚನೀಯ ಎಂದು ಪ್ರತಿಭಟನಾನಿರತರು ಟೀಕಿಸಿದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆಯನ್ನು ಕೂಡಲೇ ಸರ್ಕಾರ ಬಿಡುಗಡೆ ಮಾಡಬೇಕು. ಅಲ್ಲಿರುವ ವೈಜ್ಞಾನಿಕ ಅಂಕಿ ಅಂಶಗಳ ಪ್ರಕಾರ ನೂತನ ಮೀಸಲಾತಿಯನ್ನು ಪ್ರಕಟಿಸಬೇಕು. ಎಲ್ಲಾ ವಿರೋಧಗಳನ್ನು ನಿರ್ಲಕ್ಷಿಸಿ ಲಿಂಗಾಯಿತ-ಪಂಚಮಸಾಲಿ ಜಾತಿ ಹಾಗೂ ಇತರೆ ಮುಂದುವರೆದ ಜಾತಿಗಳನ್ನು ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸುವ ಕ್ರಮ ಕೈಗೊಂಡರೆ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ರಾಜ್ಯಾದ್ಯಾಂತ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕುರುಬ ಸಮಾಜದ ಮುಖಂಡ ಕೆ.ಎಂ.ಕೃಷ್ಣಮೂರ್ತಿ, ಕಾಂಗ್ರೆಸ್ ಒಬಿಸಿ ನಗರಾಧ್ಯಕ್ಷ ಪು.ಮಹೇಶ್, ವಿವಿಧ ಸಮಾಜಗಳ ಮುಖಂಡರಾದ ಶ್ರೀನಿವಾಸ್ ಮೂರ್ತಿ, ಜೆ.ಮುನಿರಾಜು, ಪರಮೇಶ್, ಚಂದ್ರಮೋಹನ್, ಲಾವಣ್ಯ ನಾಗರಾಜ್ ಹಾಗೂ ತಾಲೂಕಿನ ಎಲ್ಲಾ ಹಿಂದುಳಿದ ಜಾತಿಗಳ ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

52 minutes ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

5 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

6 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

7 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

9 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

12 hours ago