ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಉತ್ತರ ಪ್ರದೇಶ ಮೂಲದ ಖುಷಿಕುಮಾರ್ (24) ಎಂದು ಗುರುತಿಸಲಾಗಿದೆ.
ಹರಿಯಾಣದಿಂದ ಬೆಂಗಳೂರಿಗೆ ದ್ವಿಚಕ್ರ ವಾಹನಗಳ ಬಿಡಿಭಾಗಗಳನ್ನು ಸಾಗಿಸುತ್ತಿದ್ದ ಐಚರ್ ವಾಹನವು ಮಂಗಳವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ರಾಷ್ಟ್ರೀಯ ಹೆದ್ದಾರಿ–44ರಲ್ಲಿ ದೇವನಹಳ್ಳಿ ಬೈಪಾಸ್ ಮೂಲಕ ಸಂಚರಿಸುತ್ತಿತ್ತು. ಈ ವೇಳೆ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿ ಏಕಾಏಕಿ ಬ್ರೇಕ್ ಹಾಕಿ ನಿಂತಿದ್ದರಿಂದ, ಐಚರ್ ಚಾಲಕ ವಾಹನವನ್ನು ನಿಯಂತ್ರಿಸಲು ಸಾಧ್ಯವಾಗದೆ ಕಂಟೈನರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿಯ ರಭಸಕ್ಕೆ ಐಚರ್ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಖುಷಿಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಹಾಗೂ ಸಂಚಾರ ಪೊಲೀಸರು ತಕ್ಷಣ ಅವರನ್ನು ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ದಾಖಲಿಸಿದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ದೇವನಹಳ್ಳಿ ಸಂಚಾರ ಠಾಣೆ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ, ಸಂಚಾರವನ್ನು ಸುಗಮಗೊಳಿಸಿದರು.
ಈ ಸಂಬಂಧ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್‌ಪೆಕ್ಟರ್ ಮುರಳೀಧರ್ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ ಬಳಿಕ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…