ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ಕಳೆದ ರಾತ್ರಿ 11.30ರ ಸಮಯದಲ್ಲಿ ನಾರನಹಳ್ಳಿ ಬಳಿ ಸಂಭವಿಸಿದೆ.
ಮೃತ ದುರ್ದೈವಿಯನ್ನು ದೊಡ್ಡಬಳ್ಳಾಪುರ ನಗರದ ನಿವಾಸಿ ಶ್ರೇಯಸ್ (25 ವರ್ಷ) ಎಂದು ಗುರುತಿಸಲಾಗಿದೆ.
ದೊಡ್ಡಬಳ್ಳಾಪುರ ದಾಬಸ್‌ಪೇಟೆ ನಡುವಿನ ರಾಷ್ಟ್ರೀಯ ಹೆದ್ದಾರಿ ನಾರನಹಳ್ಳಿ ಬಳಿ ಮುಂದೆ ಸಾಗುತ್ತಿದ್ದ ಲಾರಿ, ಏಕಾಏಕಿ ಎಡಬಲಕ್ಕೆ ತೆರಳಿದ ಕಾರಣ ಹಿಂದೆ ಬರುತ್ತಿದ್ದ ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಎಲೆಕ್ಟ್ರಿಕ್ ಕಾರು ತೀವ್ರ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದ ಶ್ರೇಯಸ್ ಸಾವನಪ್ಪಿದ್ದಾರೆ ತಿಳಿದುಬಂದಿದೆ.
ಈ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…