ಧೂಳಿನ ಬಿರುಗಾಳಿ ಮತ್ತು ಭಾರೀ ಮಳೆಯ ನಡುವೆ ಮುಂಬೈನ ಘಾಟ್‌ಕೋಪರ್‌ನಲ್ಲಿ ದೈತ್ಯ ಜಾಹೀರಾತು ಫಲಕ ಕುಸಿದು ಕನಿಷ್ಠ ಮೂವತ್ತೈದು ಜನರು ಗಾಯಗೊಂಡಿದ್ದಾರೆ. ಇನ್ನು 100ಕ್ಕೂ ಹೆಚ್ಚು ಮಂದಿ ಜಾಹೀರಾತು ಫಲಕದಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ.
ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಮುಂದಿನ 3-4 ಗಂಟೆಗಳಲ್ಲಿ ಪಾಲ್ಘರ್ ಮತ್ತು ಥಾಣೆ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 50-60 ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚು ಮತ್ತು ಸಾಧಾರಣದಿಂದ ತೀವ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.