ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಜಾನಪದ ಕಲಾವಿದ ಹಾಗೂ ಹಾಡುಗಾರ ಗೋ.ನಾ ಸ್ವಾಮಿಗೆ ಮಹಾರಾಷ್ಟ್ರದ ಮುಂಬೈ ನಗರದ ಕರ್ನಾಟಕ ಸಂಘ ಅಂಧೇರಿ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಕರ್ನಾಟಕ ವತಿಯಿಂದ ಹೊರನಾಡು ಕನ್ನಡ ಸಂಸ್ಕೃತಿ ಸಂಭ್ರಮ 2024 ಸಾಲಿನಲ್ಲಿ ನೀಡುವ ಜಾನಪದ ಸಿರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಮಹಾರಾಷ್ಟ್ರದ ರಾಜಧಾನಿ ಮುಂಬೈನ ರಾಧಾಬಾಯಿ ಟಿ.ಭಂಡಾರಿ ಸಭಾಗೃಹದ ಬಂಟರ ಭವನದಲ್ಲಿ ಕರ್ನಾಟಕ ರಾಜ್ಯದ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಪ್ರಶಸ್ತಿ ಪ್ರಧಾನ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕನ್ನಡ ಗಡಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವನಿಮರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಸಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಮಾಜಿ ನಿರ್ದೇಶಕ ವಿಶ್ವನಾಥ್ ಹಿರೇಮಠ, ಸೇರಿದಂತೆ ಅನೇಕ ಸಾಹಿತಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರು ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿದ್ದರು.
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…