ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಜಾನಪದ ಕಲಾವಿದ ಹಾಗೂ ಹಾಡುಗಾರ ಗೋ.ನಾ ಸ್ವಾಮಿಗೆ ಮಹಾರಾಷ್ಟ್ರದ ಮುಂಬೈ ನಗರದ ಕರ್ನಾಟಕ ಸಂಘ ಅಂಧೇರಿ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಕರ್ನಾಟಕ ವತಿಯಿಂದ ಹೊರನಾಡು ಕನ್ನಡ ಸಂಸ್ಕೃತಿ ಸಂಭ್ರಮ 2024 ಸಾಲಿನಲ್ಲಿ ನೀಡುವ ಜಾನಪದ ಸಿರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ,
ಈ ಪ್ರಶಸ್ತಿಯು ಮುಂದಿನ ತಿಂಗಳು ಜೂನ್ 9.ರಂದು ಭಾನುವಾರ ಮಹಾರಾಷ್ಟ್ರದ ರಾಜಧಾನಿ ಮುಂಬೈನ ರಾಧಾಬಾಯಿ ಟಿ.ಭಂಡಾರಿ ಸಭಾಗೃಹದ ಬಂಟರ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಚಿವ ಶಿವರಾಜ್ ತಂಗಡಗಿ, ಸಣ್ಣ ನೀರಾವರಿ ಸಚಿವ ಎನ್.ಎಸ್ ಬೋಸರಾಜ್ ಭಾಗವಹಿಸಲಿದ್ದು ಅಧ್ಯಕ್ಷತೆಯನ್ನು ಸದಾಶಿವ ಶೆಟ್ಟಿ ಕುಳೂರು ಕನ್ಯಾನ ವಹಿಸಲಿದ್ದು ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಅನೇಕ ಸಾಹಿತಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…