Categories: ಕೋಲಾರ

ಮುಂಬೈ ಅಂಧೇರಿ ಸಂಘದ ಜಾನಪದ ಸಿರಿ ಪ್ರಶಸ್ತಿಗೆ ಜಿಲ್ಲೆಯ ಗೋ.ನಾ ಸ್ವಾಮಿ ಆಯ್ಕೆ

ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಜಾನಪದ ಕಲಾವಿದ ಹಾಗೂ ಹಾಡುಗಾರ ಗೋ.ನಾ ಸ್ವಾಮಿಗೆ ಮಹಾರಾಷ್ಟ್ರದ ಮುಂಬೈ ನಗರದ ಕರ್ನಾಟಕ ಸಂಘ ಅಂಧೇರಿ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಕರ್ನಾಟಕ ವತಿಯಿಂದ ಹೊರನಾಡು ಕನ್ನಡ ಸಂಸ್ಕೃತಿ ಸಂಭ್ರಮ 2024 ಸಾಲಿನಲ್ಲಿ ನೀಡುವ ಜಾನಪದ ಸಿರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ,

ಈ ಪ್ರಶಸ್ತಿಯು ಮುಂದಿನ ತಿಂಗಳು ಜೂನ್ 9.ರಂದು ಭಾನುವಾರ ಮಹಾರಾಷ್ಟ್ರದ ರಾಜಧಾನಿ ಮುಂಬೈನ ರಾಧಾಬಾಯಿ ಟಿ‌.ಭಂಡಾರಿ ಸಭಾಗೃಹದ ಬಂಟರ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಚಿವ ಶಿವರಾಜ್ ತಂಗಡಗಿ, ಸಣ್ಣ ನೀರಾವರಿ ಸಚಿವ ಎನ್.ಎಸ್ ಬೋಸರಾಜ್ ಭಾಗವಹಿಸಲಿದ್ದು ಅಧ್ಯಕ್ಷತೆಯನ್ನು ಸದಾಶಿವ ಶೆಟ್ಟಿ ಕುಳೂರು ಕನ್ಯಾನ ವಹಿಸಲಿದ್ದು ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಅನೇಕ ಸಾಹಿತಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

10 minutes ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

4 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

4 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

6 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

11 hours ago