ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು.
ಕ್ರೆಡಲ್ 2024-25ನೇ ಸಾಲಿನಲ್ಲಿ 257.25 ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ ಶೇ. 30ರಷ್ಟು ಡಿವಿಡೆಂಡ್ 77,17,50,000 ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಎಲ್ ಕಚೇರಿಯಲ್ಲಿ ಸ್ವೀಕರಿಸಿದರು.
ಇದೇ ವೇಳೆ ಕ್ರೆಡಲ್ ವತಿಯಿಂದ ಮಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕ ಟಿ.ಡಿ. ರಾಜೇಗೌಡ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…