ವಾಸ್ತು ನೆಪದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಸಿಎಂ ಸಿದ್ದರಾಮಯ್ಯ ಇಂದು ಓಪನ್ ಮಾಡಿಸಿ ಮೂಢನಂಬಿಕೆಗೆ ಬ್ರೇಕ್ ಹಾಕಿದ್ದಾರೆ.
ಅನ್ನಭಾಗ್ಯ ಯೋಜನೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿ ಈ ಕುರಿತು ಪ್ರಶ್ನೆ ಮಾಡಿದಾಗ ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ, ಕೂಡಲೇ ಬಾಗಿಲು ತೆರೆಯಲು ಸಿಬ್ಬಂದಿಗೆ ಹೇಳಿ ಆ ಬಾಗಿಲಿನಿಂದಲೇ ಸಭೆಗೆ ಹೋದ ಸಿಎಂ ಸಿದ್ದರಾಮಯ್ಯ.
ಜನರ ಬಗ್ಗೆ ಕಾಳಜಿ, ನಡತೆಯಲ್ಲಿ ಪ್ರಾಮಾಣಿಕತೆ,
ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ ಎಂದು ಟ್ವಿಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ,
ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ.
ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ. ನಡೆ – ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ. ಜನತೆಯ ಆಶೀರ್ವಾದ ಇರಲಿ ಎಂದ ಸಿಎಂ ಸಿದ್ದರಾಮಯ್ಯ.