ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಸಿ.ಕೆ. ಬಾಬಾ ಅವರಿಗೆ 2024ರ ಮುಖ್ಯಮಂತ್ರಿ ಪ್ರಶಸ್ತಿ ಲಭಿಸಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಇದು ಕರ್ನಾಟಕದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗೌರವವನ್ನೇ ಹೆಚ್ಚಿಸಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಪೊಲೀಸ್ ಇಲಾಖೆಯಲ್ಲಿನ ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ಗುರುತಿಸಿ ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕಗಳನ್ನು ಘೋಷಿಸಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕ ಸಿ.ಕೆ. ಬಾಬಾ ಅವರಿಗೆ 2024ರ ಮುಖ್ಯಮಂತ್ರಿ ಪ್ರಶಸ್ತಿ ಲಭಿಸಿತ್ತು. ಈ ಹಿನ್ನೆಲೆ ಪ್ರಶಸ್ತಿಗೆ ಭಾಜನರಾದ ಸಿ.ಕೆ ಬಾಬಾ ಅವರನ್ನು ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಭಿನಂದಿಸಿದ್ದಾರೆ.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಡಾ.ಅನುರಾಧಾ ಸೇರಿದಂತೆ ಇತರರು ಉಪಸ್ಥಿತರಿದ್ದರು.