ಮದ್ಯ ಮಾರಾಟಗಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನಡೆಸಿದ ಸಭೆ ಫಲಪ್ರದವಾಗಿದ್ದು, ಮದ್ಯ ಮಾರಾಟಗಾರರು ತಮ್ಮ ಮುಷ್ಕರವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ತಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದ್ದಾರೆ.
ಸಭೆಯಲ್ಲಿ ಮದ್ಯ ಮಾರಾಟಗಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಮಾತುಗಳು:
* ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಿ, ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ.
* ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ಬರುವಂತೆ enforcement ಮಾಡಲಾಗುವುದು.
* ಅಧಿಕಾರಿಗಳು ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ನಿಗಾ ವಹಿಸಲು ಅಬಕಾರಿ ಆಯುಕ್ತರಿಗೆ ಸೂಚನೆ ನೀಡಿದ್ದೇನೆ.
* ಅಬಕಾರಿ ಇಲಾಖೆಯ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ.
* ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
* ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು.
ಅಬಕಾರಿ ಇಲಾಖೆಯಲ್ಲಿ (Excise Department) ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ, ಪ್ರಮೋಷನ್ಗೆ ಸನ್ನದುದಾರರಿಂದ ಮನಸೋ ಇಚ್ಛೆ ಕೋಟಿ ಕೋಟಿ ರೂ. ಲಂಚ ಕೇಳಲಾಗುತ್ತಿದೆ. ಅಧಿಕಾರಿಗಳ ಲಂಚಾವತಾರದಿಂದ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್ಗೆ ಕರೆ ನೀಡಲಾಗಿತ್ತು.
ಮದ್ಯ ಮಾರಾಟಗಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನಡೆಸಿದ ಸಭೆ ಫಲಪ್ರದವಾಗಿದ್ದು, ಮದ್ಯ ಮಾರಾಟಗಾರರು ತಮ್ಮ ಮುಷ್ಕರವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…
ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…