ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮದ್ಯ ಮಾರಾಟಗಾರರ ಸಂಘ ಸಭೆ: ಸಭೆ ಫಲಪ್ರದ: ಮುಷ್ಕರ ಕೈಬಿಟ್ಟ ಮದ್ಯ ಮಾರಾಟಗಾರರು

ಮದ್ಯ ಮಾರಾಟಗಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನಡೆಸಿದ ಸಭೆ ಫಲಪ್ರದವಾಗಿದ್ದು, ಮದ್ಯ ಮಾರಾಟಗಾರರು ತಮ್ಮ ಮುಷ್ಕರವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ತಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದ್ದಾರೆ.

ಸಭೆಯಲ್ಲಿ ಮದ್ಯ ಮಾರಾಟಗಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಮಾತುಗಳು:

* ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಿ, ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ.

* ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ಬರುವಂತೆ enforcement ಮಾಡಲಾಗುವುದು.

* ಅಧಿಕಾರಿಗಳು ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ನಿಗಾ ವಹಿಸಲು ಅಬಕಾರಿ ಆಯುಕ್ತರಿಗೆ ಸೂಚನೆ ನೀಡಿದ್ದೇನೆ.

* ಅಬಕಾರಿ ಇಲಾಖೆಯ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ.

* ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

* ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು.

ಅಬಕಾರಿ ಇಲಾಖೆಯಲ್ಲಿ (Excise Department) ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ, ಪ್ರಮೋಷನ್​ಗೆ ಸನ್ನದುದಾರರಿಂದ ಮನಸೋ ಇಚ್ಛೆ ಕೋಟಿ ಕೋಟಿ ರೂ. ಲಂಚ ಕೇಳಲಾಗುತ್ತಿದೆ. ಅಧಿಕಾರಿಗಳ ಲಂಚಾವತಾರದಿಂದ‌ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್​ಗೆ ಕರೆ ನೀಡಲಾಗಿತ್ತು.

ಮದ್ಯ ಮಾರಾಟಗಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನಡೆಸಿದ ಸಭೆ ಫಲಪ್ರದವಾಗಿದ್ದು, ಮದ್ಯ ಮಾರಾಟಗಾರರು ತಮ್ಮ ಮುಷ್ಕರವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

12 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

17 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

21 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago