ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ:ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ….

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯ ಮುಖ್ಯಾಂಶಗಳು:

• ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ.

• ಈ ಯೋಜನೆಯಡಿ 40 ಸಾವಿರ ಪಂಪ್ ಸೆಟ್ ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕು.

• 25ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ.

• ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಟ್ರಾನ್ಸ್ ಫಾರ್ಮರ್ ಗಳನ್ನು ಇಲಾಖೆ ಒದಗಿಸಲಿದೆ.

• ನೀರಾವರಿ ಪಂಪ್ ಸೆಟ್ ಗಳಿಗೆ 2024-25ರ ಸಾಲಿನಲ್ಲಿ 12,785 ಕೋಟಿ ರೂಪಾಯಿಗಳ ಅನುದಾನ ಹಂಚಿಕೆ ಆಗಿದ್ದು, ಫೆಬ್ರವರಿ 2025 ವರೆಗೆ ರೂ. 11,720 ಕೋಟಿ ಬಿಡುಗಡೆ ಆಗಿದೆ. 2025-26ರಲ್ಲಿ 16,021 ಕೋಟಿ ರೂಪಾಯಿಗಳ ಆಯವ್ಯಯ ಹಂಚಿಕೆ ಆಗಿದೆ.

Leave a Reply

Your email address will not be published. Required fields are marked *

error: Content is protected !!