ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ನಡೆಯಿತು.
2024-25ನೇ ಸಾಲಿನ ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಒತ್ತು ನೀಡಲು ಸಚಿವರು ಸೂಚಿಸಿದರು. ದೇವಾಲಯದ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಧಾಮಿಕ ದತ್ತಿ ಆಯುಕ್ತರಾದ ವೆಂಕಟೇಶ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಎನ್.ಶಿವಶಂಕರ, ಸರ್ಕಾರದ ಉಪ ಕಾರ್ಯದರ್ಶಿಗಳಾದ ಸತ್ಯವತಿ, ಪ್ರಾಧಿಕಾರದ ಕಾರ್ಯದರ್ಶಿಗಳಾದ ಎಂ.ನಾರಾಯಣಸ್ವಾಮಿ, ಪ್ರಧಾನ ಅರ್ಚಕರಾದ ಆರ್.ಸುಬ್ರಹ್ಮಣ್ಯ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಇಲಾಖಾ ಅಧಿಕಾರಿಗಳು ಮತ್ತು ದೇವಾಲಯದ ಸಿಬ್ಬಂದಿ ಹಾಜರಿದ್ದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…