ಮುಡಾ ನಿವೇಶನ ಹಂಚಿಕೆ ಪ್ರಕರಣ: ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ವಿಚಾರ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ- ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ- ಸಿಎಂ ಸಿದ್ದರಾಮಯ್ಯ

ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಅವರ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ.

ನಮ್ಮ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರದ ಪಾಲುದಾರರು. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ.
ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ, ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದರು.

ನನ್ನ ವಿರುದ್ಧ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ .ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆಗೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗಿಲ್ಲ ಎಂದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

10 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

20 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago