ಮುಡಾ ಪ್ರಕರಣ ಸಂಬಂಧ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೆ, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ. ನನ್ನ ಮೇಲೆ ದುರುದ್ದೇಶದಿಂದ ಕೂಡಿದ ಸುಳ್ಳು ಪ್ರಕರಣ ಇದಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ವಾಸ್ತವಾಂಶ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸ್ನೇಹಮಯಿ ಕೃಷ್ಣ ಅವರು ಕೋರಿದಂತೆ, ರಾಜ್ಯಪಾಲರ ಆದೇಶದಂತೆ ಲೋಕಾಯುಕ್ತ ವಿಚಾರಣೆಯನ್ನು ನಡೆಸಲಾಗಿದೆ. ಈಗ ಬಿಜೆಪಿ ನಾಯಕರು ಲೋಕಾಯುಕ್ತ ವಿಚಾರಣೆ ಬೇಡ, ಸಿಬಿಐಗೆ ವಹಿಸಬೇಕು ಎಂದು ತಗಾದೆ ತೆಗೆದರೆ ಅದು ವಿಚಾರಣೆಯ ವಿರುದ್ಧವಾಗಿದ್ದಾರೆ ಎಂಬ ಅರ್ಥವಲ್ಲವೇ? ಇದರಿಂದಲೇ ಅವರ ಎಲ್ಲಾ ಆರೋಪ ಸುಳ್ಳು ಎಂದು ಸ್ಪಷ್ಟವಾಗುತ್ತದೆ ಎಂದರು.
ಕೇಂದ್ರ ಸರ್ಕಾರದ ಅಧೀನದಲ್ಲಿ ಸಿಬಿಐ ಇದೆ. ಬಿಜೆಪಿಯವರು ಇದುವರೆಗೆ ಯಾವುದಾದರೂ ಹಗರಣವನ್ನು ಸಿಬಿಐ ಗೆ ವಹಿಸಿದ್ದಾರೆಯೇ? ಲೋಕಾಯುಕ್ತ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾಯುಕ್ತದಲ್ಲಿ ನಂಬಿಕೆಯಿಲ್ಲದ ಬಿಜೆಪಿಯವರಿಗೆ ಕಾನೂನಿನ ಬಗ್ಗೆಯೂ ಗೌರವವಿಲ್ಲ. ರಾಜ್ಯಪಾಲರು ಕೂಡ ಲೋಕಾಯುಕ್ತದಲ್ಲಿಯೇ ತನಿಖೆಯಾಗಬೇಕೆಂದು ಸೂಚಿಸಿದ್ದು, ಅದರಂತೆ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.
ಮುಡಾದಿಂದ 14 ನಿವೇಶನಗಳು ಕಾನೂನೂಬದ್ಧವಾಗಿಯೇ ಹಂಚಿಕೆ ಆಗಿದೆ. ಬಿಜೆಪಿ – ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ವಿಚಾರಣೆಯಲ್ಲಿ ಇಂದು ಉತ್ತರವನ್ನು ನೀಡಿದ್ದೇನೆ. ತನಿಖೆಯನ್ನು ಕಾನೂನುರೀತ್ಯಾ ಮುಂದುವರೆಸಲಿದ್ದಾರೆ ಎಂದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನನ್ನ ಬಳಿಯಿಲ್ಲ ಹಾಗೂ ನನ್ನಿಂದ ಯಾವುದೇ ದಾಖಲೆ ಕೇಳಲಾಗಿಲ್ಲ. ಇಡೀ ಪ್ರಕರಣವೇ ಒಂದು ಷಡ್ಯಂತ್ರವಾಗಿರುವುದರಿಂದ ನ್ಯಾಯಾಲಯದಲ್ಲಿ ತೀರ್ಮಾನವಾಗುವವರೆಗೆ ನನ್ನ ರಾಜಕೀಯ ಜೀವನಕ್ಕೆ ಯಾವುದೇ ಕಪ್ಪು ಮಸಿ ಇಲ್ಲ. ನನ್ನ ಮೇಲೆ ಮಾಡಲಾಗಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರವನ್ನು ನೀಡಲಿದ್ದೇನೆ ಎಂದು ಹೇಳಿದರು.
ಬೆಂಗಳೂರು: ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ…
ಚಲಿಸುತ್ತಿದ್ದ ರೈಲಿಗೆ ನಿವೃತ್ತ ಎಎಸ್ಐ ಪೊಲೀಸ್ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕುಕ್ಕರಹಳ್ಳಿ ಕೆರೆ ಜಂಕ್ಷನ್ ಬಳಿ ನಡೆದಿದೆ. ಲವಕುಶ…
ರಾಜ್ಯದ, ಸಮಾಜದ, ಪ್ರಜಾಪ್ರಭುತ್ವದ, ಮಾನವೀಯ ಮೌಲ್ಯಗಳ, ನೈತಿಕ ತತ್ತ್ವಗಳ, ನಾಗರಿಕ ಪ್ರಜ್ಞೆಯ ಘನತೆಯನ್ನು ರಕ್ಷಿಸಲು ಕಳಕಳಿಯ ಮನವಿ. ನಮ್ಮ ಮಕ್ಕಳ…
ದೊಡ್ಡಬಳ್ಳಾಪುರ: ಸಾಮಾಜಿಕ ನ್ಯಾಯದ ಪರವಾಗಿ ರಾಜಕೀಯ ಹೋರಾಟ ನಡೆಸಿ, ಸಹಕಾರ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ ಜೆಡಿಎಸ್…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಸೂಲಿಬೆಲೆ ಪಟ್ಟಣದಲ್ಲಿ ಶನಿವಾರ 1 ವರ್ಷದ ಗಂಡು ಮಗುವೊಂದನ್ನು ವಾಮಾಚಾರಕ್ಕೆ ಬಲಿಕೊಡಲು ಸಿದ್ಧತೆ…
ಕಾಡು ಉಳಿಸಿ....... ನಾಡು ಉಳಿಸಿ....... ಈ ತಕ್ಷಣಕ್ಕೆ ಯಾವುದು ಹೆಚ್ಚು ಮಹತ್ವದ್ದು ಮತ್ತು ತೀರಾ ಅನಿವಾರ್ಯವಾದದ್ದು....... ಇತ್ತೀಚೆಗೆ ಶಾಂತಿಗಾಗಿ ನೊಬೆಲ್…