ಮುಡಾ ಹಗರಣ: ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್: ಶೋಕಾಸ್ ನೋಟಿಸ್ ನ್ನು ಹಿಂಪಡೆಯುವಂತೆ ಕಾಂಗ್ರೆಸ್ ಒತ್ತಾಯ

ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್ ನ್ನು ಖಂಡಿಸಿ ಕೂಡಲೇ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ದೂರಿನನ್ವಯ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಆದೇಶ ಹೊರಡಿಸಬಾರದು. ಬಿಜೆಪಿಯ ಏಜೆಂಟ್ ಆಗಿ ಅಬ್ರಾಹಂ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯ ವರ್ಚಸ್ಸನ್ನು ತಾಳಲಾರದೇ ಬಿಜೆಪಿಗರು ಕುತಂತ್ರ ಮಾಡುತ್ತಿದ್ದಾರೆ. ಬಿಜೆಪಿಗರು ಸಿದ್ದರಾಮಯ್ಯ ಅವರಿಗೆ ಕಳಂಕ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಲಕ್ಷ್ಮಿಪತಿ ಆರೋಪಿಸಿದರು.

ಮುಂದಿನ ದಿನಗಳಲ್ಲಿ ಏನಾದರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ ರಾಜ್ಯದಲ್ಲಿ ಉಗ್ರ ಹೋರಾಟ, ಪ್ರತಿಭಟನೆಗಳು ನಡೆಯುತ್ತವೆ. ಕೂಡಲೇ ಸಿದ್ದರಾಮಯ್ಯಗೆ ರಾಜ್ಯಪಾಲರು ಕೊಟ್ಟಿರುವ ಶೋಕಾಸ್ ನೋಟಿಸ್ ನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯನವರ ರಾಜಕೀಯ ಜೀವನದಲ್ಲಿ ಶಾಸಕರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿರುವ ಕಾಲದಲ್ಲಿ ಅಧಿಕಾರ ದುರುಪಯೋಗ, ಹಗರಣಗಳು ನಡೆದಿರುವ ನಿದರ್ಶನಗಳಿಲ್ಲ. ಅವರು ತಮ್ಮ ರಾಜಕೀಯದುದ್ದಕ್ಕೂ ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯನವರ ವಿರುದ್ಧ ದೂರು ನೀಡಿದ ದೂರುದಾರನ ಹಿನ್ನೆಲೆ ಆತನ ಮೇಲೆ‌ ಇರುವ ಆರೋಪಗಳು, ದೂರುಗಳನ್ನು ಪರಿಶೀಲಿಸಬೇಕು. ದೂರುದಾರ ನೀಡಿರುವ ದೂರಿನಲ್ಲಿ ಮೂಡಾನಿವೇಶನ ಮಂಜೂರು ಮಾಡಿದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ಶಿಫಾರಸ್ಸು‌ ಮಾಡಿರುವುದಿಲ್ಲ. ಹಾಗಾಗಿ ಶೋಕಾಸ್ ನೋಟಿಸ್ ನ್ನು ಹಿಂಪಡೆಯುವಂತೆ ಕೋರಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ನೀಡಲಾಯಿತು.

ಈ ವೇಳೆ ಜಿಲ್ಲಾ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಅಹಿಂದ ಸಂಘಟನೆಗಳ ಒಕ್ಕೂಟದ ಮುಖಂಡರು, ಕಾಂಗ್ರೆಸ್ ಹಿರಿಯ ಮುಖಂಡರು ಸೇರಿದಂತೆ ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

9 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

19 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago