ಮುಡಾ ಹಗರಣ ಹಿನ್ನೆಲೆ: ರಾಜ್ಯಪಾಲರ ನಡೆ ಖಂಡಿಸಿರುವ ಕಾಂಗ್ರೆಸ್: ಇಂದು ರಾಜಭವನ ಚಲೋ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ- ಬೆಂ.ಗ್ರಾ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ನಾರಾಯಣಸ್ವಾಮಿ‌ ಕಿಡಿ

ಮುಡಾ ಹಗರಣ ಹಿನ್ನೆಲೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನಡೆ ಖಂಡಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ಕೈಗೊಂಬೆಯಾಗಿರುವ ರಾಜ್ಯಪಾಲರು ಕರ್ನಾಟಕ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿ ಬೇರೆ ರಾಜ್ಯಕ್ಕೆ ಹೋಗುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ನಾರಾಯಣಸ್ವಾಮಿ ಆಗ್ರಹಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರವನ್ನ ಅಸ್ಥಿರಗೊಳಿಸಲು ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ಕುತಂತ್ರವನ್ನ ಖಂಡಿಸಿ ಇಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು, ದೊಡ್ಡಬಳ್ಳಾಪುರದಿಂದ ಹೋರಾಟ ಪ್ರತಿಭಟನಾ ತಂಡದ ನೇತೃತ್ವವನ್ನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಾಜಘಟ್ಟ ನಾರಾಯಣಸ್ವಾಮಿ ವಹಿಸಿದ್ದರು.

ದೊಡ್ಡಬಳ್ಳಾಪುರದಿಂದ ಹೊರಡುವ ಮುನ್ನ ಪಬ್ಲಿಕ್ ಮಿರ್ಚಿ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ತೇಜೋವಧೆ ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಟಕ ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ಕಾಂಗ್ರೆಸ್ ವತಿಯಂದ ರಾಜಭವನ ಚಲೋಗೆ ಕರೆ ನೀಡಲಾಗಿದೆ. ವಾರದ ಹಿಂದೆ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ರಾಜ್ಯಪಾಲರ ಧೋರಣಿ ವಿರುದ್ದ ಪ್ರತಿಭಟನೆ ನಡೆಸುವ ಮೂಲಕ ಸಿದ್ದರಾಮಯ್ಯ ವಿರುದ್ಧ ನೀಡಿರುವ ಆದೇಶ ಹಿಂತೆಗೆದುಕೊಳ್ಳುವಂತೆ ಆಗ್ರಹಿಸಲಾಗಿತು. ರಾಜ್ಯಪಾಲರು ಕೇಸ್ ವಾಪಸ್ ಪಡೆಯದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ, ಕೆಪಿಸಿಸಿ ಉಪಾಧ್ಯಕ್ಷರಾದ ಟಿ.ವೆಂಕಟರಮಣಯ್ಯ ಹಾಗೂ ಜಿಲ್ಲಾ ಅಧ್ಯಕ್ಷರಾದ ಸಿ.ಆರ್.ಗೌಡರ ಆದೇಶದ ಮೇರೆಗೆ ದೊಡ್ಡಬಳ್ಳಾಪುರದಿಂದ ರಾಜಭವನ ಮುತ್ತಿಗೆ ಹಾಕಲು ನಾವು ಹೊರಟ್ಟಿದ್ದೇವೆ ಎಂದರು.

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ, ಅವರಿಗೆ ಕರ್ನಾಟಕದ ರಾಜ್ಯಪಾಲರಾಗುವ ಗೌರವವಿಲ್ಲ, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿಯವರೇ ಹೇಳಿದ್ದಾರೆ, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪಾತ್ರವಿಲ್ಲವೆಂದು, ಆದರು ಸಹ ರಾಜ್ಯಪಾಲರು ದ್ವೇಷ ರಾಜಕಾರಣವನ್ನ ಮಾಡುತ್ತಿದ್ದಾರೆ, ಕರ್ನಾಟಕ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿ ಬೇರೆ ರಾಜ್ಯಕ್ಕೆ ಹೋಗುವಂತೆ ಆಗ್ರಹಿಸಿದರು. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಕೇಸ್ ವಾಪಸ್ ತೆಗೆದು ಕೊಳ್ಳದಿದ್ದಾರೆ, ಬೂತ್ ಮಟ್ಟದಿಂದ ಹಿಡಿದು ತಾಲೂಕು ಮಟ್ಟದವರೆಗೂ ಉಪವಾಸ ಸತ್ಯಾಗ್ರಹ ನಡೆಸಲಾಗುವುದ್ದಾಗಿ ಎಚ್ಚರಿಕೆಯನ್ನ ನೀಡಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಆರ್.ಎಸ್.ರಾಜಣ್ಣ, ಕಾಂಗ್ರೆಸ್ ಸೇವಾದಳ ಕಸಬಾ ಅಧ್ಯಕ್ಷರಾದ ಗಂಗರಾಜು, ಕಾಂಗ್ರೆಸ್ ಯುವ ಮುಖಂಡರಾದ ಆರ್.ಎಸ್.ಮೈಲಾರಪ್ಪ, ದಾಸಗೊಂಡನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕಾರದ ಸುಮಂತ್ ಗೌಡ, ತಿಮ್ಮಸಂದ್ರ ಗ್ರಾಮ ಪಂಚಾಯತ್ ಸದಸ್ಯರಾದ ರಘು, ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ರವಿಯಣ್ಣ ಸೇರಿದಂತೆ ರಾಜಘಟ್ಟ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!