Categories: ಮಂಡ್ಯ

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.

ಮೃತರನ್ನು ಚನ್ನಪಟ್ಟಣ ಮೂಲದವರಾದ ಶ್ವೇತಾ (38), ಚೈತ್ರಾ (20), ಪ್ರಿಯಾಂಕಾ (28), ವಿಜಯಮ್ಮ (50) ಹಾಗೂ ಕಾರು ಚಾಲಕ ಮಹೇಶ್ ಎಂದು ಗುರುತಿಸಲಾಗಿದೆ.

ಕುಟುಂಬದ ಸದಸ್ಯರು ಬೆಂಗಳೂರಿನಲ್ಲಿ ನೆಲೆಸಿದ್ದು, ಭಾನುವಾರ ಬಾಡಿಗೆ ಕಾರಿನಲ್ಲಿ ದೇವರ ದರ್ಶನಕ್ಕಾಗಿ ಹೊರಟಿದ್ದರು. ಮೊದಲು ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿ, ಬಳಿಕ ಸಂಜೆ ಸುಮಾರು 4.30ರ ವೇಳೆಗೆ ಮುತ್ತತ್ತಿಗೆ ತೆರಳಿದ್ದರು. ಅಲ್ಲಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಕಾವೇರಿ ನದಿ ತೀರಕ್ಕೆ ಬಂದಿದ್ದಾರೆ.

ಸಂಜೆ ಸುಮಾರು 4.45ರ ವೇಳೆಗೆ ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದೆ ಎಂದು ಭಾವಿಸಿ ಫೋಟೋ ತೆಗೆಯಲು ಕೆಲವರು ನೀರಿಗೆ ಇಳಿದಿದ್ದಾರೆ. ಈ ವೇಳೆ ವಿಜಯಮ್ಮ ನೀರಿನಲ್ಲಿ ಮುಳುಗತೊಡಗಿದ್ದು, ಅವರನ್ನು ರಕ್ಷಿಸಲು ಮುಂದಾದ ಇತರರು ಕೂಡ ನೀರಿನ ಸೆಳೆತಕ್ಕೆ ಸಿಲುಕಿ ಒಬ್ಬರ ಹಿಂದೆ ಒಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಘಟನೆ ಗಮನಿಸಿದ ಸ್ಥಳೀಯರು ರವಿ ಹಾಗೂ ನಾಲ್ಕು ವರ್ಷದ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ.

ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಕಾವೇರಿ ನದಿಯಲ್ಲಿ ಅಪಾಯದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದರೂ, ಅದನ್ನು ನಿರ್ಲಕ್ಷಿಸಿ ನೀರಿಗೆ ಇಳಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಕುಟುಂಬದವರ ಆಕ್ರಂದನಕ್ಕೆ ಕಾರಣವಾಗಿದ್ದು, ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

9 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

12 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

14 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

17 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

18 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago