ಮುತ್ತೂರು ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ ಬಾಲಕ ಸಾವು ಪ್ರಕರಣ: ಒಬ್ಬ ಆಯೋಜಕ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಸ್ಫೋಟಗೊಂಡು ಒಬ್ಬ ಬಾಲಕ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆಯೋಜಕ ಸೇರಿ ಮೂವರನ್ನು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದು ಸೂಕ್ತ ವಿಚಾರಣೆ ನಡೆಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಒಬ್ಬ ಆಯೋಜಕ‌ ಸೇರಿ ಮೂವರಿಗೆ ನ್ಯಾಯಾಂಗ ಬಂಧನ ವಿಧಿಸಿ‌ದೆ ಎಂದು ಮೂಲಗಳಿಂದ ತಿಳಿದುಬಂದಿದೆ…

ಕಾರ್ಯಕ್ರಮ ಆಯೋಜಕ ಮುತ್ತೂರು ನಿವಾಸಿ ಮಾರುತಿ(19), ಕಿಶೋರ್(25), ಮಂಜುನಾಥ್(38) ನ್ಯಾಯಾಂಗ ಬಂಧನಕ್ಕೆ ಒಳಗಾದ  ವ್ಯಕ್ತಿಗಳು…

ಘಟನೆ ವಿವರ

ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಆ.29ರ ಸಂಜೆ ಫ್ರೆಂಡ್ಸ್ ವಿನಾಯಕ ಗ್ರೂಪ್‌ ವತಿಯಿಂದ ಗಣೇಶ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ವೇಳೆ ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲೆ ಇಟ್ಟಿದ್ದ ಪಟಾಕಿಗಳು ಸಿಡಿದಿತ್ತು. ಘಟನೆಯಲ್ಲಿ ಕ್ರೇನ್‌ನಲ್ಲಿ ಚಾಲಕನ ಜೊತೆ ಕುಳಿತಿದ್ದ ಇಬ್ಬರು ಮಕ್ಕಳು ಮೇಲೆ ಹಾರಿ ಬಿದ್ದಿದ್ದು, ಪಕ್ಕದಲ್ಲೇ ಸಾಗುತ್ತಿದ್ದ ಭದ್ರತೆಗೆ ನಿಯೋಜನೆ ಮಾಡಲಾಗಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಚಾಲಕನಿಗೆ ಗಂಭೀರ ಪೆಟ್ಟಾಗಿತ್ತು. ಅಲ್ಲದೆ ಪಟಾಕಿ ಸ್ಪೋಟಗೊಂಡು ಚದುರಿದ ಪರಿಣಾಮ ಮೆರವಣಿಗೆ ಸಾಗುತ್ತಿದ್ದ 8ಕ್ಕೂ ಹೆಚ್ಚು ಯುವಕರಿಗೆ ಗಾಯಗಳಾಗಿತ್ತು.

ಧನುಷ್ ರಾವ್(15) ಮೃತ ಬಾಲಕ, ಗಣೇಶ್(16), ಯೋಗೇಶ್(15), ಮುನಿರಾಜು(27), ಪವರ್ ಲಿಫ್ಟ್ ಚಾಲಕ ನಾಗರಾಜು(35), ಚೇತನ್ ಶಾವಿ(13), ಪೊಲೀಸ್ ಕಾನ್ಸ್ಟೇಬಲ್ ಜಾಕಿರ್ ಹುಸೇನ್ ಸೇರಿದಂತೆ ಇತರರಿಗೆ ಗಂಭೀರ ಗಾಯಗಳಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಆ.29 ರಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಆಯೋಜಕರ ಮೇಲೆ ದೂರು ದಾಖಲಾಗಿತ್ತು. ದೂರಿನ ಮೇರೆಗೆ ನಿರ್ಲಕ್ಷ್ಯವಹಿಸಿದ್ದ ಆಯೋಜಕರನ್ನು ವಶಕ್ಕೆ ಪಡೆದು ಸೂಕ್ತ ತನಿಖೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಇನ್ನು ಮುಂದೆ ಗಣೇಶ ಪ್ರತಿಷ್ಟಾಪನೆ, ಮೆರವಣಿಗೆ, ವಿಸರ್ಜನೆ ವೇಳೆ ಯಾವುದೇ ಅವಘಡ ಸಂಭವಿಸದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಒಂದು ವೇಳೆ ಕಾನೂನು ಎಲ್ಲೆ ಮೀರಿದರೆ ಸಂಬಂಧಪಟ್ಟವರಿಗೆ ಶಿಕ್ಷೆ ಕಟ್ಟಿಟ್ಟಬುತ್ತಿಯಾಗಿರುತ್ತದೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

2 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

4 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

11 hours ago