ಮುತ್ತೂರು ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ ಬಾಲಕ ಸಾವು ಪ್ರಕರಣ: ಒಬ್ಬ ಆಯೋಜಕ ಸೇರಿ ಮೂವರು ಜೈಲು ಪಾಲು

ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಸ್ಫೋಟಗೊಂಡು ಒಬ್ಬ ಬಾಲಕ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆಯೋಜಕ ಸೇರಿ ಮೂವರನ್ನು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದು ಸೂಕ್ತ ವಿಚಾರಣೆ ನಡೆಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಒಬ್ಬ ಆಯೋಜಕ‌ ಸೇರಿ ಮೂವರನ್ನು ಜೈಲಿಗಟ್ಟಿದೆ….

ಕಾರ್ಯಕ್ರಮ ಆಯೋಜಕ ಮುತ್ತೂರು ನಿವಾಸಿ ಮಾರುತಿ(19), ಕಿಶೋರ್(25), ಮಂಜುನಾಥ್(38) ಜೈಲು ಪಾಲಾದ ವ್ಯಕ್ತಿಗಳು…

ಘಟನೆ ವಿವರ

ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಆ.29ರ ಸಂಜೆ ಫ್ರೆಂಡ್ಸ್ ವಿನಾಯಕ ಗ್ರೂಪ್‌ ವತಿಯಿಂದ ಗಣೇಶ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ವೇಳೆ ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲೆ ಇಟ್ಟಿದ್ದ ಪಟಾಕಿಗಳು ಸಿಡಿದಿತ್ತು. ಘಟನೆಯಲ್ಲಿ ಕ್ರೇನ್‌ನಲ್ಲಿ ಚಾಲಕನ ಜೊತೆ ಕುಳಿತಿದ್ದ ಇಬ್ಬರು ಮಕ್ಕಳು ಮೇಲೆ ಹಾರಿ ಬಿದ್ದಿದ್ದು, ಪಕ್ಕದಲ್ಲೇ ಸಾಗುತ್ತಿದ್ದ ಭದ್ರತೆಗೆ ನಿಯೋಜನೆ ಮಾಡಲಾಗಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಚಾಲಕನಿಗೆ ಗಂಭೀರ ಪೆಟ್ಟಾಗಿತ್ತು. ಅಲ್ಲದೆ ಪಟಾಕಿ ಸ್ಪೋಟಗೊಂಡು ಚದುರಿದ ಪರಿಣಾಮ ಮೆರವಣಿಗೆ ಸಾಗುತ್ತಿದ್ದ 8ಕ್ಕೂ ಹೆಚ್ಚು ಯುವಕರಿಗೆ ಗಾಯಗಳಾಗಿತ್ತು.

ಧನುಷ್ ರಾವ್(15) ಮೃತ ಬಾಲಕ, ಗಣೇಶ್(16), ಯೋಗೇಶ್(15), ಮುನಿರಾಜು(27), ಪವರ್ ಲಿಫ್ಟ್ ಚಾಲಕ ನಾಗರಾಜು(35), ಚೇತನ್ ಶಾವಿ(13), ಪೊಲೀಸ್ ಕಾನ್ಸ್ಟೇಬಲ್ ಜಾಕಿರ್ ಹುಸೇನ್ ಸೇರಿದಂತೆ ಇತರರಿಗೆ ಗಂಭೀರ ಗಾಯಗಳಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಆ.29 ರಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಆಯೋಜಕರ ಮೇಲೆ ದೂರು ದಾಖಲಾಗಿತ್ತು. ದೂರಿನ ಮೇರೆಗೆ ನಿರ್ಲಕ್ಷ್ಯವಹಿಸಿದ್ದ ಆಯೋಜಕರನ್ನು ವಶಕ್ಕೆ ಪಡೆದು ಸೂಕ್ತ ತನಿಖೆ ನಡೆಸಿ ಜೈಲು ಪಾಲು ಮಾಡಲಾಗಿದೆ.

ಇನ್ನು ಮುಂದೆ ಗಣೇಶ ಪ್ರತಿಷ್ಟಾಪನೆ, ಮೆರವಣಿಗೆ, ವಿಸರ್ಜನೆ ವೇಳೆ ಯಾವುದೇ ಅವಘಡ ಸಂಭವಿಸದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಒಂದು ವೇಳೆ ಕಾನೂನು ಎಲ್ಲೆ ಮೀರಿದರೆ ಸಂಬಂಧಪಟ್ಟವರಿಗೆ ಶಿಕ್ಷೆ ಕಟ್ಟಿಟ್ಟಬುತ್ತಿಯಾಗಿರುತ್ತದೆ.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

8 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

9 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

10 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

14 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

21 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago