ಮುತ್ತೂರು ವಾರ್ಡ್ ನಲ್ಲಿ ಮೂಲಭೂತ ಸೌಕರ್ಯಗಳ ಮರೀಚಿಕೆ: ಮ್ಯಾನ್ ಹೋಲ್ ತುಂಬಿ ರಸ್ತೆಗೆ ಉಕ್ಕಿ‌ ಹರಿದ ಮಲ ಮಿಶ್ರಿತ ಕೊಳಚೆ ನೀರು: ಎಲ್ಲೆಂದರಲ್ಲಿ ಕಸದ ರಾಶಿ: ಹಾಳಾದ ರಸ್ತೆಗಳು: ತುಂಬಿ‌ ತುಳುಕುವ ಚರಂಡಿಗಳು: ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ, ಬೀದಿದೀಪಗಳು ಇಲ್ಲದೆ ಪ್ರಾಣ ಕಳೆದುಕೊಳ್ಳುತ್ತಿರುವ ಜನ: ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ನಿವಾಸಿಗಳ ಆಕ್ರೋಶ

ನಗರದ ನಗರಸಭೆ ವ್ಯಾಪ್ತಿಯ ಮುತ್ತೂರು 6ನೇ ವಾರ್ಡ್ ನಲ್ಲಿ ಮೂಲಭೂತ ಸವಲತ್ತುಗಳಿಲ್ಲದೆ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ. ಸರ್ಕಾರಿ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ಇರುವ ಮ್ಯಾನ್ ಹೋಲ್ ತುಂಬಿ ಗೊಬ್ಬು ನಾರುತ್ತಿರುವ ಮಲ ಮಿಶ್ರಿತ ಕೊಳಚೆ ನೀರು ಪ್ರತಿದಿನ ರಸ್ತೆಗೆ ಹರಿಯುತ್ತಿರುತ್ತದೆ. ಸ್ಥಳದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

 

 

ಕೊಳಚೆ ನೀರಿನ ದುರ್ವಾಸನೆಯಿಂದ ಶಾಲಾ ಮಕ್ಕಳ ಆರೋಗ್ಯ ಹದಗೆಟ್ಟು ಆಸ್ಪತ್ರೆ ಪಾಲಾಗುತ್ತಿದ್ದಾರೆ. ಸ್ಥಳದಲ್ಲಿ ದೇವಸ್ಥಾನ, ಶುದ್ಧ ಕುಡಿಯುವ ನೀರಿನ ಘಟಕ ಇದ್ದು, ಸದಾ ಹರಿಯುವ ಈ ಕೊಳಚೆ ನೀರನ್ನು ದಾಟಿ ದೇವಸ್ಥಾನಕ್ಕೆ, ಶುದ್ಧ ಕುಡಿಯುವ ನೀರಿಗಾಗಿ ಇಲ್ಲಿನ ನಿವಾಸಿಗಳು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ಕಳೆದ ಒಂದು ತಿಂಗಳಿನಿಂದಲೂ ಮಲ‌ ಮಿಶ್ರಿತ ಕೊಳಚೆ ನೀರು ರಸ್ತೆಗೆ ಹರಿಯುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಮಾತ್ರ ಇತ್ತ ಕಡೆ ಗಮನ ಹರಿಸಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಎಲ್ಲೆಂದರಲ್ಲಿ ಕಸದ ರಾಶಿಗಳು ಇದ್ದು, ಕಸದ ರಾಶಿಗಳನ್ನ ಸೂಕ್ತ ರೀತಿಯಲ್ಲಿ ತೆರವು ಮಾಡದೇ ಇರುವುದರಿಂದ ನೊಣ, ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ನೊಣ, ಸೊಳ್ಳೆ, ದುರ್ನಾತದಿಂದ ಅಕ್ಕಪಕ್ಕದ ಮನೆಯವರು ಹೈರಾಣಾಗುತ್ತಿದ್ದಾರೆ. ಚರಂಡಿಗಳು ತುಂಬಿ ತುಳುಕುತ್ತಿವೆ. ರಸ್ತೆಗಳು ಹಾಳಾಗಿವೆ ಎಂದು ಸ್ಥಳೀಯರು ಆರೋಪ‌ ಮಾಡಿದ್ದಾರೆ.

ಮುತ್ತೂರು ವಾರ್ಡ್ ಗೆ ಹೊಂದಿಕೊಂಡಂತೆ ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ಇಲ್ಲಿನ ನಿವಾಸಿಗಳು ಹೆದ್ದಾರಿಯನ್ನ ದಾಟಿ ಮನೆಗಳಿಗೆ ತೆರಳಬೇಕು, ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ, ಬೀದಿದೀಪಗಳು, ರಸ್ತೆ ಉಬ್ಬುಗಳು ಸೇರಿದಂತೆ ಯಾವುದೇ ರಸ್ತೆ ನಿಯಮ ಫಲಕಗಳು ಇಲ್ಲದೇ ಇರುವ ಕಾರಣ ಅಪಘಾತಗಳು ಪದೇ ಪದೇ ಮರುಕಳಿಸಿ ಆನೇಕ ಸಾವು ನೋವುಗಳಾಗಿವೆ.

 

ರಾಜ್ಯ ಹೆದ್ದಾರಿಗೆ ಟೋಲ್ ಸಂಗ್ರಹ ಆರಂಭವಾಗಿ ಆನೇಕ ವರ್ಷಗಳೇ ಕಳೆದಿದ್ದರು ಸಹ ಇಲ್ಲಯವರೆಗೆ ಮುತ್ತೂರು ಬಳಿ ರಸ್ತೆ ಕಾಮಗಾರಿ ಅರೆಬರೆಯಾಗಿಯೇ ಉಳಿದಿದೆ.

ಕೂಡಲೇ ಈ ಎಲ್ಲಾ ಸಮಸ್ಯೆ ಬಗೆಹರಿಸುವಂತೆ ನಗರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

2 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

5 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

17 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

18 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

23 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

1 day ago