ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮದೇವತೆ ಶ್ರೀ ಮುತ್ಯಾಲಮ್ಮ ದೇವಾಲಯದ ಮುಂಭಾಗದಲ್ಲಿ ಮಣ್ಣಿನ ರಸ್ತೆಯಿದ್ದು, ಮಳೆಬಂದಾಗ ಮಳೆನೀರು ದೇವಾಲಯದ ಮುಂಭಾಗದಲ್ಲಿ ನಿಂತು ಬರುವಂತ ಭಕ್ತಾದಿಗಳಿಗೆ ತೊಂದರೆ ಆಗುತ್ತಿತ್ತು. ಇದನ್ನು ಗಮನಿಸಿದ ದೇವಾಲಯದ ಆಡಳಿತ ಮಂಡಳಿ, ದೇವಾಲಯದ ಮುಂಭಾಗದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಒಳಚರಂಡಿ ಮಾಡಿಸಿಕೊಡುವಂತೆ ಶಾಸಕರಲ್ಲಿ ಮನವಿಮಾಡಿದ್ದರು.
ಅದರಂತೆ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು ರವರು ಶಾಸಕರ ಅನುದಾನದಲ್ಲಿ ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶ್ರೀಮುತ್ಯಾಲಮ್ಮ ದೇವಾಲಯದ ಮುಂದೆ 5 ಲಕ್ಷ ಅನುದಾನದಲ್ಲಿ ಸಿಸಿ ಚರಂಡಿ, ಕಾಂಕ್ರೀಟ್ ರಸ್ತೆ ಹಾಗೂ ಡೆಕ್ ಸ್ಲಾಬ್ ಕಾಮಗಾರಿ ಮಾಡಲಾಗಿದೆ ಎಂದು ಶ್ರೀಮುತ್ಯಾಲಮ್ಮ ಸೇವಾ ದತ್ತಿಯ ಉಪಾಧ್ಯಕ್ಷ ಕೆ.ನಾಗೇಶ್ ತಿಳಿಸಿದರು.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…