ಮುತ್ಯಾಲಮ್ಮ ದೇವಾಲಯದ ಮುಂಭಾಗದಲ್ಲಿ ನಡೆದ ಸಿಸಿ ಚರಂಡಿ, ಡೆಕ್ ಸ್ಲಾಬ್ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿ

ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮದೇವತೆ‌ ಶ್ರೀ ಮುತ್ಯಾಲಮ್ಮ ದೇವಾಲಯದ ಮುಂಭಾಗದಲ್ಲಿ ಮಣ್ಣಿನ ರಸ್ತೆಯಿದ್ದು, ಮಳೆಬಂದಾಗ ಮಳೆನೀರು ದೇವಾಲಯದ ಮುಂಭಾಗದಲ್ಲಿ ನಿಂತು ಬರುವಂತ ಭಕ್ತಾದಿಗಳಿಗೆ ತೊಂದರೆ ಆಗುತ್ತಿತ್ತು. ಇದನ್ನು ಗಮನಿಸಿದ ದೇವಾಲಯದ ಆಡಳಿತ ಮಂಡಳಿ, ದೇವಾಲಯದ ಮುಂಭಾಗದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಒಳಚರಂಡಿ ಮಾಡಿಸಿಕೊಡುವಂತೆ ಶಾಸಕರಲ್ಲಿ ಮನವಿಮಾಡಿದ್ದರು.

ಅದರಂತೆ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು ರವರು ಶಾಸಕರ  ಅನುದಾನದಲ್ಲಿ ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶ್ರೀಮುತ್ಯಾಲಮ್ಮ ದೇವಾಲಯದ ಮುಂದೆ 5 ಲಕ್ಷ ಅನುದಾನದಲ್ಲಿ ಸಿಸಿ ಚರಂಡಿ, ಕಾಂಕ್ರೀಟ್ ರಸ್ತೆ ಹಾಗೂ ಡೆಕ್ ಸ್ಲಾಬ್ ಕಾಮಗಾರಿ ಮಾಡಲಾಗಿದೆ ಎಂದು ಶ್ರೀಮುತ್ಯಾಲಮ್ಮ ಸೇವಾ ದತ್ತಿಯ ಉಪಾಧ್ಯಕ್ಷ ಕೆ.ನಾಗೇಶ್ ತಿಳಿಸಿದರು.

ಜೊತೆಯಲ್ಲಿ ಸಂಘಟನ ಕಾರ್ಯದರ್ಶಿ ಜೆ.ಕುಮಾರ್ ಹಾಗೂ ನಿರ್ದೇಶಕರಾದ ಕೆ.ಪಿ.ರಂಗಸ್ವಾಮಿ ಆಡಳಿತ ಮಂಡಳಿಯ ಸದಸ್ಯರಿದ್ದರು

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

2 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

5 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

17 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

23 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

23 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago