ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ
ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…