ಮುಷ್ಕರನಿರತ ನೌಕರರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸುವಂತೆ ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಒತ್ತಾಯ

ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರವನ್ನ ತಹಶೀಲ್ದಾರ್ ಕಚೇರಿ ಮುಂದೆ ನಡೆಸುತ್ತಿದ್ದಾರೆ.

ಸರ್ಕಾರಿ ಮುಷ್ಕರನಿರತ ನೌಕರರ ಬೇಡಿಕೆಗಳನ್ನು ಆದಷ್ಟು ಬೇಗ ಈಡೆರಿಸುವಂತೆ ಕರವೇ ಜಿಲ್ಲಾಧ್ಯಕ್ಷರಾದ ಪುರುಷೋತ್ತಮ್ ಗೌಡ ಸರ್ಕಾರವನ್ನ ಒತ್ತಾಯಿಸಿದ್ದಾರೆ.

ದೊಡ್ಡಬಳ್ಳಾಪುರ ತಹಶೀಲ್ದಾರ್ ಕಚೇರಿ ಮುಂದೆ 2ನೇ ದಿನ ಮುಷ್ಕರ ನಡೆಯುತ್ತಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರವೇ ನಾರಾಯಣಗೌಡ ಬಣ ಪರವಾಗಿ ನಿಲ್ಲುತ್ತದೆ. ಸದಾ ಕನ್ನಡ ನಾಡು ನುಡಿ ಬಗ್ಗೆ ಹೋರಾಟ ಮಾಡುತ್ತಿರುವ ಸಂಘಟನೆ ಸರ್ಕಾರಿ ನೌಕರರ ನ್ಯಾಯುಯುತ ಹೋರಾಟಕ್ಕೂ ಬೆಂಬಲವಾಗಿ ನಿಲ್ಲಲಾಗುವುದು ಎಂದು ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಹೇಳಿದ್ದಾರೆ.
ಆಡಳಿತ ಯಂತ್ರದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿದೆ, ಅವರೀವತ್ತು ತಮ್ಮ ಬೇಡಿಕೆಗಳ ಈಡೆರಿಕೆಗಾಗಿ ಮುಷ್ಕರಕ್ಕೆ ಕುಳಿತ್ತಿರುವುದು ಬಹಳ ನೋವಿನ ವಿಚಾರವಾಗಿದೆ. ಅವರ ಬೇಡಿಕೆಗಳು ನ್ಯಾಯಯುತವಾಗಿದೆ, 7ನೇ ವೇತನ ನೀಡುವುದು, ವಿಮಾ ಸೌಲಭ್ಯ , ಸುಸಜ್ಜಿತವಾದ ಕಟ್ಟಡ, ಇವು ಮೂಲಭೂತ ಸೌಲಭ್ಯಗಳಾಗಿದ್ದು ಇವುಗಳನ್ನು ಸರ್ಕಾರ ನೀಡುಬೇಕು‌ ಎಂದರು.
Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

2 hours ago

ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…

4 hours ago

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

18 hours ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

18 hours ago

ಸ್ನೇಹಿತರ ದಿನದ ಅಂಗವಾಗಿ ನಂದಿಬೆಟ್ಟಕ್ಕೆ ತೆರಳಿದ್ದ ಸ್ನೇಹಿತರು: ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…

1 day ago

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

2 days ago