ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿರುವ ಸಾರಿಗೆ ನೌಕರರಿಗೆ ಧನ್ಯವಾದಗಳು- ಸಿಎಂ ಸಿದ್ದರಾಮಯ್ಯ

ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವರು ಹಾಗೂ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆ ಸಭೆ ನಡೆಸಿ ಚರ್ಚಿಸಿದರು.

ಸಾರಿಗೆ ನೌಕರರು ತಮ್ಮ ವಿವಿಧ 13 ಬೇಡಿಕೆಗಳನ್ನು ಮುಂದಿಟ್ಟು, ಡಿ.31ರಂದು ಮುಷ್ಕರಕ್ಕೆ ಕರೆ ನೀಡಿದ್ದರು. ಈ ಎಲ್ಲಾ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಸಮಾಲೋಚಿಸಿ, ಪರಿಹರಿಸುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದ್ದು, ಇದರಿಂದ ನೌಕರರು ಮುಷ್ಕರ ಕೈಬಿಡುವುದಾಗಿ ತಿಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹ

ಈ ಹಿಂದಿನ ಬಿಜೆಪಿ ಸರ್ಕಾರ ಸಾರಿಗೆ ನಿಗಮಗಳಿಗೆ ನೀಡಬೇಕಿರುವ ಹಣದಲ್ಲಿ ರೂ.5,900 ಕೋಟಿಯನ್ನು ಬಾಕಿ ಉಳಿಸಿದ್ದರಿಂದ ಸಮಸ್ಯೆ ಉದ್ಭವವಾಗಿದೆ. ನೌಕರರ ಕಷ್ಟವನ್ನು ಮನಗಂಡು ರಾಜ್ಯ ಸರ್ಕಾರ ರೂ.2,000 ಕೋಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಮುಂಬರುವ ಬಜೆಟ್‌ನಲ್ಲಿ ಬಾಕಿ ಉಳಿದಿರುವ ಹಣವನ್ನು ಬಿಡುಗಡೆಗೊಳಿಸಿ ನೌಕರರ ಹಿತ ಕಾಪಾಡಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿರುವ ಸಾರಿಗೆ ನೌಕರರಿಗೆ ಧನ್ಯವಾದಗಳು. ನಿಮ್ಮ ಅಹವಾಲುಗಳನ್ನು ಸಮಚಿತ್ತದಿಂದ ಆಲಿಸಿ ಪರಿಹರಿಸಲು ಸರ್ಕಾರ ಮುಕ್ತವಾಗಿದೆ ಎಂದು ಹೇಳಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

7 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

12 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

12 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

17 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago