ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವರು ಹಾಗೂ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆ ಸಭೆ ನಡೆಸಿ ಚರ್ಚಿಸಿದರು.
ಸಾರಿಗೆ ನೌಕರರು ತಮ್ಮ ವಿವಿಧ 13 ಬೇಡಿಕೆಗಳನ್ನು ಮುಂದಿಟ್ಟು, ಡಿ.31ರಂದು ಮುಷ್ಕರಕ್ಕೆ ಕರೆ ನೀಡಿದ್ದರು. ಈ ಎಲ್ಲಾ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಸಮಾಲೋಚಿಸಿ, ಪರಿಹರಿಸುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದ್ದು, ಇದರಿಂದ ನೌಕರರು ಮುಷ್ಕರ ಕೈಬಿಡುವುದಾಗಿ ತಿಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹ
ಈ ಹಿಂದಿನ ಬಿಜೆಪಿ ಸರ್ಕಾರ ಸಾರಿಗೆ ನಿಗಮಗಳಿಗೆ ನೀಡಬೇಕಿರುವ ಹಣದಲ್ಲಿ ರೂ.5,900 ಕೋಟಿಯನ್ನು ಬಾಕಿ ಉಳಿಸಿದ್ದರಿಂದ ಸಮಸ್ಯೆ ಉದ್ಭವವಾಗಿದೆ. ನೌಕರರ ಕಷ್ಟವನ್ನು ಮನಗಂಡು ರಾಜ್ಯ ಸರ್ಕಾರ ರೂ.2,000 ಕೋಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಮುಂಬರುವ ಬಜೆಟ್‌ನಲ್ಲಿ ಬಾಕಿ ಉಳಿದಿರುವ ಹಣವನ್ನು ಬಿಡುಗಡೆಗೊಳಿಸಿ ನೌಕರರ ಹಿತ ಕಾಪಾಡಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿರುವ ಸಾರಿಗೆ ನೌಕರರಿಗೆ ಧನ್ಯವಾದಗಳು. ನಿಮ್ಮ ಅಹವಾಲುಗಳನ್ನು ಸಮಚಿತ್ತದಿಂದ ಆಲಿಸಿ ಪರಿಹರಿಸಲು ಸರ್ಕಾರ ಮುಕ್ತವಾಗಿದೆ ಎಂದು ಹೇಳಿದರು.
ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…