ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಸೆಲೆಕ್ಷನ್ ಬೇಡ, ಎಲೆಕ್ಷನ್ ಬೇಕು- ಮುಸ್ಲಿಂ ಮುಖಂಡರ ಆಗ್ರಹ

ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಸೆಲೆಕ್ಷನ್ ಬೇಡ, ಎಲೆಕ್ಷನ್ ಮಾಡಿ ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.

 ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಅಡಾಕ್ ಕಮಿಟಿ ಮಾಡುವ ಪ್ರಯತ್ನವನ್ನು ವಿರೋಧಿಸಿ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ಮುಸ್ಲಿಂ ಸಮುದಾಯ 25 ಸಾವಿರದಷ್ಟು ಜನಸಂಖ್ಯೆಯನ್ನು ಹೊಂದಿದೆ. 37 ಮಸೀದಿಗಳಿವೆ, ಎಲ್ಲಾ ಮಸೀದಿ ಮುಖಂಡರು ಸೇರಿ ಒಟ್ಟಾರೆ ಮುಸ್ಲಿಂ ಸಮುದಾಯವನ್ನು ಸೇರಿಸಿ ಮತದಾರರ ಪಟ್ಟಿ ತಯಾರಿಸಿ ಚುನಾವಣೆ ನಡೆಸಬೇಕು ಎಂದು ಮನವಿ ಕೊಟ್ಟಿದ್ದೇವೆ, ಆದರೆ ನಗರದ ಎರಡು ವಾರ್ಡ್‌ಗಳಿಗಷ್ಟೇ ಚುನಾವಣೆ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಅಸೋಸಿಯೇಷನ್ ಗೆ ಕಳೆದ ಹದಿಮೂರು ವರ್ಷಗಳ ಹಿಂದೆ ಚುನಾವಣೆ ನಡೆದಿತ್ತು, ದೇಶದ ಸಂವಿಧಾನವನ್ನೇ ಕಾಲ ಕಾಲಕ್ಕೆ ಜನರ ಅನುಕೂಲಕ್ಕಾಗಿ ತಿದ್ದುಪಡಿ ಮಾಲಾಗುತ್ತಿದೆ. ಆದರೆ ಬೈಲಾ ದಲ್ಲಿರುವ ಸಣ್ಣ ಲೋಪವನ್ನು ತೋರಿಸಿ ಅಡಾಕ್ ಕಮಿಟಿಗಳನ್ನೇ ಮಾಡುತ್ತಾ ಬರುತ್ತಿದ್ದಾರೆ. ತಾಲ್ಲೂಕಿನ ಸಮಗ್ರ ಮುಸ್ಲಿಮರನ್ನು ಪ್ರತಿನಿಧಿಸಬೇಕಾದ ವಕ್ಫ್‌ಬೋರ್ಡ್ ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಗೆ ಮಣೆ ಹಾಕುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಕಾಲ ಕಾಲಕ್ಕೆ ಚುನಾವಣೆಗಳು ನಡೆದು ಆಡಳಿತ ಮಂಡಳಿ ರಚನೆಯಾದರೆ ವರ್ಷಕೊಮ್ಮೆ ಸಾಮೂಹಿಕ ವಿವಾಹ, ಅಶಕ್ತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ವಯೋವೃದ್ದರಿಗೆ ಪೆನ್ಶನ್ ಕೊಡಬಹುದು. ಕಳೆದ ಹನ್ನೆರಡು ವರ್ಷಗಳಿಂದ ಇಂಹ ಯಾವುದೇ ಸಮಾಜಮುಖಿ ಕಾರ್ಯಗಳು ನಡೆದಿಲ್ಲ. ಬೆರಳೆಣಿಕೆಯಷ್ಟು ಮಂದಿ ಸೇರಿ ಸಭೆ ನಡೆಸಿ ಟೀ ಕುಡಿಯಲು ₹35000 ವೆಚ್ಚ ತೋರಿಸಿತ್ತಿದ್ದಾರೆ ಎಂದು ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪರೋಕ್ಷವಾಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀನಗರ ಬಶೀರ್ ಮಾಜಿ ಸದಸ್ಯರು ಮುಸ್ಲಿಂ ಯೂಥ್ ಅಸೋಸಿಯೇಷನ್. ರಫೀಕ್ ಪಾಷಾ ಮಾಜಿ ಸದಸ್ಯರು ಇಬ್ರಾಹಿಂ( ಬಾಪ್ ). ಇಫ್ತೆ ಕಾರ್ ಅಹಮದ್. ನಯಾಜ್ ಖಾನ್. ಮೊಹಮ್ಮದ್ ರಜಾ. ಮೊಹಮ್ಮದ್ ಏನಾಯತ್. ಫಯಾಜ್. ಆದಿಲ್. ಶಬ್ಬೀರ್. ಇಮ್ರಾನ್. ರಫೀಕ್.. ಫಯಾಜ್. ನೂರ್ ಭಾಯ್. ಇಲಿಯಾಸ್ ಅಹಮದ್, ನವೀದ್,  ಸೇರಿದಂತೆ ಹತ್ತಾರು ಮುಸ್ಲಿಂ ಮುಖಂಡರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

57 minutes ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

5 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

6 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

12 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

12 hours ago

ವೃದ್ಧ ದಂಪತಿಗೆ ‘ವಾತ್ಸಲ್ಯ’ ಮನೆ ಹಸ್ತಾಂತರ

ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

1 day ago