ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರು ರಾಜ್ಯದ ಗೌರವ ಉಳಿಸುವ ದೃಷ್ಟಿಯಿಂದ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ಕ್ಕೆ ಮುತ್ತಿಗೆ ಹಾಕಲಾಯಿತು.
ಬಿಜೆಪಿ ಶಾಸಕ ಹಾಗೂ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕುಮಾರಕೃಪಾ ರಸ್ತೆಯಲ್ಲಿ ಇರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ದೀಪಕ್, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಮಾಲತೇಶ್, ಮಾಧ್ಯಮ ಸಹ ಸಂಚಾಲಕರಾದ ಪ್ರಶಾಂತ್ ಕೆಡೆಂಜಿ, ದೊಡ್ಡಬಳ್ಳಾಪುರ ತಾಲೂಕು ಯುವ ಮೋರ್ಚಾ ಪ್ರಾಧಾನ ಕಾರ್ಯದರ್ಶಿ ಕೆ.ಸತೀಶ್ ಕುಮಾರ್, ಯುವ ಮೋರ್ಚಾ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಬಿಜೆಪಿ ಪ್ರತಿಭಟನೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣ ಮತ್ತು ಕಾವೇರಿ ನಿವಾಸದ ಮುಂದೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…