ಮೂಡುಬಿದಿರೆ ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದ ಬಳಿಯ ನಿರ್ಮಲಾ ಪಂಡಿತ್ ಅವರ ಕುತ್ತಿಗೆಯಿಂದ 24 ಗ್ರಾಂ ಮೌಲ್ಯದ ಚಿನ್ನದ ಸರ ಹಾಗೂ ಮೂಡುಮಾರ್ನಾಡು ಗ್ರಾಮದ ಬಸದಿ ಬಳಿಯ ಪ್ರೇಮಾ ಅವರ ಕುತ್ತಿಗೆಯಿಂದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳರಿಬ್ಬರನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ನೇತೃತ್ವದ ಪೊಲೀಸರ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಮಂಗಳೂರು ಚೆಂಬುಗುಡ್ಡೆಯ ಹಬೀಬ್ ಹಸನ್ ಯಾನೆ ಹಬ್ಬಿ ಹಾಗೂ ಬಂಟ್ವಾಳ ತಾಲೂಕು ಪರ್ಲಿಯಾ ಕ್ರಾಸ್ ರೋಡ್ ನ ಉಮ್ಮರ್ ಸಿಯಾಫ್ ಯಾನೆ ಚಿಯಾ ಬಂಧನಕ್ಕೊಳಗಾಗಿರುವ ಕಳ್ಳರು.
ಹಬ್ಬಿ ವಿರುದ್ಧ ಉಭಯ ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ಸುಮಾರು 44 ಪ್ರಕರಣಗಳಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ಹಲವು ವಾರಂಟ್ ಗಳಿತ್ತು. ಚಿಯಾ ನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
ಮಹಿಳೆಯರ ಕುತ್ತಿಗೆಯಿಂದ ಸರ ಎಗರಿಸಿ ಪರಾರಿಯಾಗಿದ್ದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಗ್ಗೆ ಜಾಡು ಹಿಡಿದು ಕಳೆದ ಕೆಲ ದಿನಗಳಿಂದ ವಿವಿಧ ರೀತಿಗಳಲ್ಲಿ ಶೋಧ ನಡೆಸಿದ್ದ ಪೊಲೀಸರ ಬಲೆಗೆ ಕೊನೆಗೂ ಕಳ್ಳರು ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ 2,50,000 ಆಗಿದೆ.
ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಡಿ.ಸಿ.ಪಿ. ಯವರಾದ ಸಿದ್ಧಾರ್ಥ ಗೋಯಲ್, ದಿನೇಶ್ ಕುಮಾರ್ ಹಾಗೂ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಅವರ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆಸಲಾಗಿದೆ.
ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎ.ಎಸ್.ಐ. ಗಳಾದ ಪ್ರಶಾಂತ್, ಮೋಹನ್ ದಾಸ್ ಕೋಟ್ಯಾನ್, ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಮುಹಮ್ಮದ್ ಇಕ್ಬಾಲ್, ಮುಹಮ್ಮದ್ ಹುಸೇನ್, ಅಖಿಲ್ ಅಹ್ಮದ್, ನಾಗರಾಜ್ ಹಾಗೂ ವೆಂಕಟೇಶ್ ಅವರು ಪಾಲ್ಗೊಂಡಿದ್ದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…