ಮೂರು ತಿಂಗಳಲ್ಲಿ 11 ದೌರ್ಜನ್ಯ ಪ್ರಕರಣಗಳು ದಾಖಲು

ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದವರಿಗೆ ಸಕಾಲದಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ 4 ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಪಿಇಎಂಎಸ್ ಮತ್ತು ಆರ್ ಕಾಯ್ದೆ-2013 ರ ಸಮಿತಿ ಸಭೆ ಹಾಗೂ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೊಲೀಸ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ಕಾನೂನಿನ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡುವ ಪ್ರಯತ್ನ ಮಾಡಬೇಕು. ದೌರ್ಜನ್ಯ ನಿಯಂತ್ರಣದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಏರ್ಪಡಿಸಿಸಬೇಕು ಎಂದರು.

*11 ದೌರ್ಜನ್ಯ ಪ್ರಕರಣ ದಾಖಲು*

ಅಕ್ಟೋಬರ್ 1 ರಿಂದ ಇಲ್ಲಿಯವರೆಗೂ ಒಟ್ಟು 11 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿ 11 ಪ್ರಕರಣಗಳಲ್ಲಿ ನೊಂದ 20 ಸಂತ್ರಸ್ತರಿಗೆ ಒಟ್ಟು 5.85 ಲಕ್ಷ ರೂ.ಗಳ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

*ಸಫಾಯಿ ಕರ್ಮಚಾರಿಗಳಿಗೆ ನಿವೇಶನ ಹಂಚಿಕೆ*

ನಗರ ಪ್ರದೇಶಗಳಲ್ಲಿ ನಿವೇಶನ, ಮನೆ ಒದಗಿಸಲು ಮೊದಲ ಆದ್ಯತೆಯಾಗಿ ಸಫಾಯಿ ಕರ್ಮಚಾರಿಗಳನ್ನು ಪರಿಗಣಿಸಲಾಗುವುದು ಮನೆಗಳಿಲ್ಲದೆ ಇರುವ ಸಫಾಯಿ ಕರ್ಮಚಾರಿಗಳಿಗೆ ನಿವೇಶನವನ್ನು ಶೀಘ್ರವಾಗಿ ಒದಗಿಸಲಾಗುವುದು. ಅವರ ಕುಟುಂಬಗಳಿಗೆ ವ್ಯಾಪಾರ, ವ್ಯವಹಾರಕ್ಕಾಗಿ ವಿವಿಧ ಕೌಶಲ್ಯ ತರಬೇತಿ, ಮಾರ್ಗದರ್ಶನ ನೀಡಿ ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ ಕಲ್ಪಿಸಿ ಕೆಲಸಕ್ಕೆ ಬೇಕಾಗುವ ಅಗತ್ಯ ಪರಿಕರಗಳನ್ನು ಅವರಿಗೆ ಒದಗಿಸುವುದರ ಜೊತೆಗೆ ವೇತನ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮ ವಹಿಸಿ ಎಂದರು.

ಜಿಲ್ಲಾ ಪೋಲಿಸ್ ವರಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಮಾತಾನಾಡಿ ಸಮಾಜದಲ್ಲಿ ಸಮಾನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವ್ಯಕ್ತಿಗಳ ಹಕ್ಕುಗಳನ್ನು ರಕ್ಷಿಸುವುದು. ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಮತ್ತು ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ಸಾಮಾಜಿಕ ನ್ಯಾಯದ ಮುಖ್ಯ ಉದ್ದೇಶವಾಗಿರುತ್ತದೆ ಹಾಗಾಗಿ ದೌರ್ಜನ್ಯವಾದರೆ ಅಥವಾ ದೌರ್ಜನ್ಯ ಕಂಡು ಬಂದರೆ ಯಾವುದೇ ರೀತಿಯ ಭಯ ಪಡದೇ ದೂರು ನೀಡಿದರೆ ಅಗತ್ಯ ವೈದ್ಯಕೀಯ ಸೇವೆ ಒದಗಿಸಿ ರಕ್ಷಣೆ ನೀಡಿ ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗುತ್ತದೆ ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್. ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಾಗೃತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

12 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

13 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

13 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

20 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

21 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

1 day ago