ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತನನ್ನು ಆನೇಕಲ್ ಟೌನ್‌ನ ಬಾರಂದೂರು ಗಲ್ಲಿಯ ಸೋಮಶೇಖರ ಅಲಿಯಾಸ್ ಡೆಡ್ಲಿ ಸೋಮ (30) ಎಂದು ಗುರುತಿಸಲಾಗಿದೆ.

ದೊಡ್ಡಬಳ್ಳಾಪುರ ಟೌನ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ವೇಳೆ ಆತ ಮಾರಾಟ ಮಾಡಲು ತಂದಿದ್ದ 2 ಕೆ.ಜಿ. 64 ಗ್ರಾಂ ಗಾಂಜಾ, ಅಂದಾಜು 1 ಲಕ್ಷ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ಸುಮಾರು ಮೂರು ವರ್ಷಗಳಿಂದ ತನ್ನ ಇರುವಿಕೆಯ ಬಗ್ಗೆ ಯಾವುದೇ ಸುಳಿವು ನೀಡದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಇದೀಗ ಗಾಂಜಾ ಮಾರಾಟದ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಎಂ.ವಿ. ಚಂದ್ರಕಾಂತ್ ಹಾಗೂ ಅಪರ ಪೊಲೀಸ್ ಅಧೀಕ್ಷಕ ಡಾ. ವೆಂಕಟೇಶ್ ಪ್ರಸನ್ನ ಅವರ ಸೂಚನೆಯಂತೆ, ದೊಡ್ಡಬಳ್ಳಾಪುರ ಡಿವೈಎಸ್ಪಿ ಪಾಂಡುರಂಗ ಎಸ್. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.

ದೊಡ್ಡಬಳ್ಳಾಪುರ ಟೌನ್ ಠಾಣೆಯ ಪ್ರಭಾರ ಇನ್‌ಸ್ಪೆಕ್ಟರ್ ಮುತ್ತುರಾಜು ಹೆಚ್. ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಯವರಾದ ಪಾಂಡುರಂಗ, ಶಿವಾನಂದ, ರೂಪೇಶ್ ಅವರು ಕಾರ್ಯಾಚರಣೆ ನಡೆಸಿದ್ದು, ಸಿಬ್ಬಂದಿಯ ಕಾರ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

6 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

9 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

12 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

14 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

15 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago