ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ- ವಿರೋಧ ಪಕ್ಷಗಳ ಸುಳ್ಳು ಆರೋಪಗಳಿಗೆ ಜನ ತಕ್ಕ ಉತ್ತರ ನೀಡಿದ್ದಾರೆ- ಬೆಂ.ಗ್ರಾ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ನಾರಾಯಣಸ್ವಾಮಿ ಹೇಳಿಕೆ

ದೊಡ್ಡಬಳ್ಳಾಪುರ : ಸಂಡೂರು, ಶಿಂಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ನಾರಾಯಣಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.

ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲವು ಮೂಲಕ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ತಕ್ಕ ಉತ್ತರವನ್ನ ನೀಡಿದೆ. ಗ್ಯಾರಂಟಿ ಯೋಜನೆಗಳ ಕುಹಕವಾಡುತ್ತಿದ್ದ ಮೈತ್ರಿ ಪಕ್ಷಗಳಿಗೆ ಮಹಿಳಾ ಮತದಾರರು ಪಾಠ ಕಲಿಸಿದ್ದಾರೆಂದು ಎಂದು ಹೇಳಿದರು.

ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರ ಕೊಡುಗೆ, ಡಿಕೆ.ಶಿವಕುಮಾರ್ ರವರ ಪರಿಶ್ರಮ ಮತ್ತು ಚುನಾವಣೆಯಲ್ಲಿ ದುಡಿದ ನಮ್ಮ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವೆ ಎಂದರು.

ಮುಡಾ ಪ್ರಕರಣವನ್ನ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಸರ್ಕಾರವನ್ನ ಬೀಳಿಸುವ ಯತ್ನ ನಡೆಸುತ್ತಿದ್ದಾರೆ. ಆದರೆ, ರಾಜ್ಯದ ಜನತೆ ವಿರೋಧ ಪಕ್ಷಗಳ ಸುಳ್ಳು ಆರೋಪಗಳ ಬೆಲೆ ಕೊಡದೆ ಅಭಿವೃದ್ಧಿ ಕಾರ್ಯಗಳನ್ನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತೆ ತನ್ನ ಒಲವು ತೋರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಆರ್ಶೀವಾದಿಸಿದ್ದಾರೆ ಎಂದರು.

ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಅವರ ತಂದೆ ಯಡಿಯೂರಪ್ಪನವರ ಹಾದಿಯಲ್ಲಿ ನಡೆಯುತ್ತಿಲ್ಲ. ತಂದೆಯಂತೆ ಅವರಿಗೆ ವರ್ಚಸಿಲ್ಲ, ಇನ್ನೂ ಕುಮಾರಸ್ವಾಮಿಯವರಿಗೆ ಆಸೆ ಅಲ್ಲ ದುರಾಸೆ ಇದೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುವ ಬದಲಿಗೆ ತಮ್ಮ ಮಗನಿಗೆ ಟಿಕೆಟ್ ನೀಡಿದ್ದಾರೆ. ಆದರೆ, ಕುಟುಂಬ ರಾಜಕಾರಣವನ್ನ ವಿರೋಧಿಸುವ ಮೂಲಕ ಕುಮಾರಸ್ವಾಮಿ ಕುಟುಂಬಕ್ಕೆ ತಕ್ಕ ಉತ್ತರವನ್ನ ನೀಡಿದ್ದಾರೆ ಎಂದರು.

Leave a Reply

Your email address will not be published. Required fields are marked *