ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಾದರಿ ಕ್ಷೇತ್ರವಾಗಿ ಹೊರಹೊಮ್ಮಲಿದೆ ಎಂದು ಇಂಧನ ಸಚಿವರೂ ಆಗಿರುವ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಗವಾರ ವ್ಯಾಪ್ತಿಯಲ್ಲಿ ಬುಧವಾರ ಕ್ಷೇತ್ರ ಪರ್ಯಟನೆ ನಡೆಸಿ ಮೂಲಸೌಕರ್ಯ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಸಚಿವರು ಮಾತನಾಡಿ, “ನಮ್ಮ ಸರ್ಕಾರದ ಯೋಜನೆಗಳು ಕ್ಷೇತ್ರದ ಜನತೆಗೆ ಮೂಲಸೌಕರ್ಯ ಒದಗಿಸುವ ಜತೆಗೆ ಭವಿಷ್ಯದಲ್ಲಿ ಸಮಗ್ರ ಅಭಿವೃದ್ದಿಯ ಚಿಂತನೆಯಿಂದ ಕೂಡಿದೆ,” ಎಂದು ತಿಳಿಸಿದರು.

“ವೈಟ್‌ಟಾಪಿಂಗ್ ರಸ್ತೆಗಳು ಗುಣಮಟ್ಟದ ರಸ್ತೆಗಳಾಗಿದ್ದು ವಾಹನ ಸವಾರರಿಗೆ ಸುರಕ್ಷತೆ ಒದಗಿಸಲಿದೆ. ರಸ್ತೆಗಳು ದಕ್ಷತೆಯಿಂದ ಇರಲಿದ್ದು, ಗುಂಡಿ ಸಮಸ್ಯೆಗಳಿಗೆ ತಿಲಾಂಜಲಿ ಹಾಡಲಿವೆ. ಬಡಾವಣೆಗಳು ಅಭಿವೃದ್ದಿಯಾದಂತೆ ಒಳಚರಂಡಿ ತ್ಯಾಜ್ಯ ನೀರಿನ ಒತ್ತಡ ಹೆಚ್ಚಾಗುತ್ತಿದ್ದು ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮಳೆಗಾಲದಲ್ಲಿ ಎದುರಾಗಲಿರುವ ಸಮಸ್ಯೆಗಳನ್ನು ನಿವಾರಿಸಲು ಇಂಟಿಗ್ರೇಟೆಡ್ ಸೀವೇಜ್ ಪಂಪಿಂಗ್ ಸಿಸ್ಟಮ್ (ಐಎಸ್‌ಪಿಎಸ್‌) ಎಂಬ ಆಧುನಿಕ ತಂತ್ರಜ್ಞಾನ ಹಾಗೂ ವ್ಯವಸ್ಥಿತ ಟ್ಯಾಂಕ್ ನಿರ್ಮಾಣ ಮಾಡುತ್ತಿದ್ದೇವೆ. ಇದು ಭವಿಷ್ಯದಲ್ಲಿ ತ್ಯಾಜ್ಯ ನೀರು ನಿರ್ವಹಣೆಗೆ ನೆರವಾಗಲಿದೆ,” ಎಂದರು.

ನಾಗವಾರ ಬಳಿಕ ಹೆಣ್ಣೂರು ಬಂಡೆ ಪ್ರದೇಶದಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಚಿವ ಕೆ.ಜೆ.ಜಾರ್ಜ್, ಇಂಧನ ಇಲಾಖೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ಕಚೇರಿಗಳಿಗೆ ಅಗತ್ಯವಿರುವ ಕಟ್ಟಡ ನಿರ್ಮಾಣದ ಬಗ್ಗೆ ಚರ್ಚೆ ನಡೆಸಿದರು.

ಇದೇ ವೇಳೆ ಮಹಾಗಣಪತಿ ದೇಗುಲದಲ್ಲಿ ನಡೆಯುತ್ತಿದ್ದ ಪೂಜೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಸ್ಥಳೀಯರು ಸಮುದಾಯ ಭವನದ ಬೇಡಿಕೆ ಮುಂದಿಟ್ಟಾಗ, ಸೂಕ್ತ ಜಾಗ ಮತ್ತು ಅನುದಾನದ ಅಂದಾಜು ಸಿದ್ದಪಡಿಸುವಂತೆ ಸ್ಥಳದಲ್ಲೇ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

*ಮೆಟ್ರೋ ಸಮೀಪದ ರಸ್ತೆ ವಿಸ್ತರಣೆಗೆ ಸೂಚನೆ*

ನಾಗವಾರ ಮೆಟ್ರೋ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ತೆರಳಿದ ಸಚಿವ ಕೆ.ಜೆ. ಜಾರ್ಜ್‌ ಅವರ ಮುಂದೆ ತಮ್ಮ ಅಹವಾಲು ಹೇಳಿಕೊಂಡ ಸ್ಥಳೀಯರು, ಮೆಟ್ರೋ ನಿಲ್ದಾಣ ನಿರ್ಮಾಣದಿಂದ ರಸ್ತೆ ಕಿರಿದಾಗಲಿದ್ದು, ಭವಿಷ್ಯದಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬಿಎಂಆರ್‌ಸಿಎಲ್ ವತಿಯಿಂದ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಸ್ಥಳವನ್ನು ಪಡೆದು ಆದ್ಯತೆಯ ಮೇರೆಗೆ ರಸ್ತೆಯನ್ನು ವಿಸ್ತರಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

*ಶಾಲೆ ಉನ್ನತೀಕರಿಸಿದ ಸಚಿವರಿಗೆ ಧನ್ಯವಾದ ಹೇಳಿದ ಸದಸ್ಯರು*

ಸಚಿವ ಕೆ.ಜೆ.ಜಾರ್ಜ್ ದೊಡ್ಡಬಾಣಸವಾಡಿಯ ಹೊರಮಾವು ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿ, ಶಾಲಾಭಿವೃದ್ದಿ ಸಮಿತಿ ಸದಸ್ಯರ ಜತೆ ಚರ್ಚೆ ನಡೆಸಿದರಲ್ಲದೆ, ಹೊಸದಾಗಿ ನಿರ್ಮಿಸುತ್ತಿರುವ ಕೊಠಡಿಗಳಿಗೆ ಅನುದಾನ ಹಾಗು ಅಗತ್ಯ ಸೌಕರ್ಯಗಳ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಲೆಗೆ ಅತ್ಯುತ್ತಮ ಸೌಕರ್ಯ ಕಲ್ಪಿಸಿ ಶೈಕ್ಷಣಿಕ ವಾತಾವರಣ ಸುಧಾರಣೆಗೆ ಕಾರಣರಾದ ಸಚಿವರಿಗೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮತ್ತು ಮಕ್ಕಳು ಧನ್ಯವಾದ ತಿಳಿಸಿದರು.

ನಾಗವಾರ ಹಾಗೂ ಹೆಣ್ಣೂರು ಪ್ರದೇಶದಲ್ಲಿನ ಕ್ಷೇತ್ರ ಯಾತ್ರೆಯಲ್ಲಿ ಹೆಣ್ಣೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್‌.ಎ. ಪುಲಿಕೇಶಿ, ಕೆಜಿ ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರ ಮುನಿರಾಜು, ಹೆಚ್‌ಬಿಆರ್‌ ವಾರ್ಡ್‌ ಅಧ್ಯಕ್ಷರಾದ ಕಲೀಮ್, ಮಹೇಶ್ ಹಾಗೂ ಎನ್‌ಎಸ್‌ಯೂಐ ಸದಸ್ಯರು, ಸಚಿವರ ವಿಶೇಷಾಧಿಕಾರಿಗಳು, ನಮ್ಮ ಮೆಟ್ರೋ, ಬೆಸ್ಕಾಂ, ಕೆಪಿಟಿಸಿಎಲ್, ಜಿಬಿಎ ಹಾಗೂ ಬೆಂಗಳೂರು ಜಲ ಮಂಡಳಿ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಘಾಟಿ ಸುಬ್ರಹ್ಮಣ್ಯ ದೇಗುಲ ಸಮೀಪ ಚಿರತೆ ಪ್ರತ್ಯಕ್ಷ: ಬೆಚ್ಚಿಬಿದ್ದ ಜನ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲ ಕೂಗಳತೆ ದೂರದಲ್ಲೇ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ...…

18 minutes ago

111.355 ಕೆ.ಜಿ ಗಾಂಜಾ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ…

16 hours ago

ಏ.12ಕ್ಕೆ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ರಾಜ್ಯಮಟ್ಟದ ಸಾಮಾನ್ಯ…

16 hours ago

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಪ್ರಾರಂಭಕ್ಕೆ ಕ್ರಮಕೈಗೊಳ್ಳಲು ಶಾಸಕ ಧೀರಜ್ ಮುನಿರಾಜ್ ಮನವಿ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು…

18 hours ago

ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಗಂಡ ಕಿರುಕುಳ ಆರೋಪ: ಗಂಡನ ವಿರುದ್ಧ ಹೆಂಡತಿ ದೂರು

ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ...…

19 hours ago

ಸಂಕಷ್ಟದಿಂದ ಸುಸ್ಥಿತಿಗೆ – ವೈದ್ಯಕೀಯದ ಅದ್ಭುತ ಸಾಧನೆ

ಬೆಂಗಳೂರು, ವೈಟ್‌ಫೀಲ್ಡ್ : ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಯುವಕನಿಗೆ…

20 hours ago