ಇತ್ತೀಚೆಗೆ ನಗರದಲ್ಲಿ ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿರುವವ ಕಳ್ಳರನ್ನು ಬಂಧಿಸಿದ ಪೊಲೀಸರು.
ನಗರ ಹಾಗೂ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಸರಣಿ ಸರಗಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೆದ್ದಲಪಾಳ್ಯ ಗ್ರಾಮದ ನಿವಾಸಿ ಆರ್. ಸುಬ್ರಮಣ್ಯ( 24), ಗೆದ್ದಲಪಾಳ್ಯ ದಿನ್ನೆಯ ನಿವಾಸಿ ಎನ್. ಪ್ರವೀಣ್ ಕುಮಾರ್ (19) ಹಾಗೂ ಪಾಲನಜೋಗಹಳ್ಳಿಯಲ್ಲಿ ವಾಸವಿರುವ ಜೊಮೆಟೊ ಡೆಲಿವರಿ ಬಾಯ್ ಎನ್. ಅಭಿಲಾಷ್(22) ಬಂಧಿತ ಆರೋಪಿಗಳು.
ಒಟ್ಟು 4( ನಗರ ಹಾಗೂ ಗ್ರಾಮಾಂತರ ಠಾಣೆಯ ತಲಾ ಎರಡು ಪ್ರಕರಣ) ಸರಗಳವು ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು, ಬಂಧಿತರಿಂದ ಸುಮಾರು 130 ಗ್ರಾಂ ತೂಕದ ನಾಲ್ಕು ಚಿನ್ನದ ಮಾಂಗಲ್ಯ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ KA- 51-4404 ನೋಂದಣಿ ಸಂಖ್ಯೆಯ ಬೈಕ್ ವಶಪಡಿಸಿಕೊಂಡಿದ್ದಾರೆ.
ಮೇ 15 ರಂದು ರಾತ್ರಿ 8 ರ ಸುಮಾರಿಗೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಪ್ಪನಪೇಟೆಯಲ್ಲಿ ವೃದ್ಧೆ ಉಗುಮಬಾಯಿ ಅವರ ಬಳಿ ಸುಮಾರು 40 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ ಪುರುಷೋತ್ತಮ್ ಅವರು ಡಿವೈಎಸ್ಪಿ ನಾಗರಾಜ್ ಮಾರ್ಗದರ್ಶನದಲ್ಲಿ ತಂಡ ರಚಿಸಿದ್ದರು.
ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ, ಅಪರಾಧ ವಿಭಾಗದ ಪಿಎಸ್‌ಐ ನಂಜುಂಡಯ್ಯ ಹಾಗೂ ಸಿಬ್ಬಂದಿಗಳಾದ ಪಾಂಡುರಂಗ, ಕರಾರ್ ಹುಸೇನ್, ವಸಂತಕುಮಾರ್, ಸುನಿಲ್ ಭಾಸಗಿ , ಹುಸೇನ್ ಸಾಬ್ ಕಂಕುರಿ ಹಾಗೂ ಯೋಗಶ್ರೀ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…